ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ವಿರಾಟ್ ಕೊಹ್ಲಿ

ಲಂಡನ್: ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಏಕದಿನ ಕ್ರಿಕೆಟಿನಲ್ಲಿ 11 ಸಾವಿರ ರನ್ ದಾಖಲೆ ಬರೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಪಂದ್ಯದ ವೇಳೆ ಮಾಜಿ ನಾಯಕ ಎಂಎಸ್ ಧೋನಿ ಸಿಡಿಸಿದ ಸಿಕ್ಸರ್ ಕಂಡು ಅಚ್ಚರಿ ವ್ಯಕ್ತಪಡಿಸಿದ್ದ ಕೊಹ್ಲಿರ ವಿಡಿಯೋ ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಬರೋಬ್ಬರಿ 30 ಮಿಲಿಯನ್ ವ್ಯೂ ಕಂಡಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೊಹ್ಲಿ, ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ನನ್ನ ರಿಯಾಕ್ಷನ್ ಕೂಡ ಟ್ವಿಟ್ಟರಿನಲ್ಲಿ 30 ಮಿಲಿಯನ್ ವ್ಯೂ ಅನ್ನು ದಾಟಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ ಎಂದು ಕೊಹ್ಲಿ ಹೇಳಿದ್ದಾರೆ. ಟ್ವಿಟ್ಟರಿನಲ್ಲಿ ಕೊಹ್ಲಿ 100 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ಟ್ವಿಟ್ಟರ್, ಫೇಸ್ ಬುಕ್ ಹಾಗೂ ಇನ್‍ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ಅತಿಹೆಚ್ಚು ಹಿಂಬಾಲಕರನ್ನ ಹೊಂದಿರುವ ಕ್ರಿಕೆಟಿಗ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಆಡಿರುವ ಮೂರು ಇನ್ನಿಂಗ್ಸ್ ಗಳಲ್ಲಿ 177 ರನ್ ಗಳಿಸಿದ್ದು, ಇದರಲ್ಲಿ 2 ಅರ್ಧ ಶತಕಗಳು ಸೇರಿದೆ. ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಸದ್ಯ 4ನೇ ಸ್ಥಾನವನ್ನು ಹೊಂದಿದ್ದು, ಆಡಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾಗಿರುವ ಪರಿಣಾಮ 7 ಅಂಕಗಳನ್ನು ಗಳಿಸಿದೆ. ಜೂನ್ 22 ರಂದು ನಡೆಯುವ ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಸಿದ್ಧತೆ ನಡೆಸಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Comments

Leave a Reply

Your email address will not be published. Required fields are marked *