ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಹೃದಯ ಸ್ತಂಭನ – ಭದ್ರತಾ ಸಿಬ್ಬಂದಿ ಹೇಳಿದ್ದೇನು?

ಮಾಸ್ಕೋ: ಕಳೆದ ವರ್ಷದಿಂದ ಉಕ್ರೇನ್‌ ವಿರುದ್ಧ ಯುದ್ಧ (Ukraine War) ಸಾರಿದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಆರೋಗ್ಯ ವಿಚಾರ ನಿರಂತರ ಚರ್ಚೆಯಲ್ಲಿದೆ. ಈ ನಡುವೆ ಪುಟಿನ್‌ ಭಾನುವಾರ ಸಂಜೆ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿರುವುದು ಕಂಡುಬಂದಿದೆ ಎಂದು ಟೆಲಿಗ್ರಾಮ್ ಚಾನೆಲ್ ‘ಜನರಲ್ SVR’ ಅನ್ನು ಉಲ್ಲೇಖಿಸಿ ವರದಿಯಾಗಿದೆ. ಜನರಲ್ ಎಸ್‌ವಿಆರ್ ಟೆಲಿಗ್ರಾಮ್‌ ಚಾಲನೆಲ್‌ ಅನ್ನು ಕ್ರೆಮ್ಲಿನ್‌ನ್‌ ನಿವೃತ್ತ ಅಧಿಕಾರಿಗಳು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಾಹಿತಿ ಪ್ರಕಾರ, ವ್ಲಾಡಿಮಿರ್‌ ಪುಟಿನ್ ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲೇ ನೆಲದ ಮೇಲೆ ಆಹಾರ ಮತ್ತು ಪಾನೀಯಗಳೊಂದಿಗೆ ಮಗುಚಿಕೊಂಡಿದ್ದ ಟೇಬಲ್‌ ಪಕ್ಕದಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು ಎಂದು ಪುಟಿನ್‌ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ದೃಷ್ಟಿ ಮಂಜಾಗ್ತಿದೆ, ಕೈ-ಕಾಲು ಸ್ವಾಧೀನ ಕಳೆದುಕೊಳ್ತಿದೆ – ಪುಟಿನ್‌ ಆರೋಗ್ಯದಲ್ಲಿ ಬಿಗ್‌ ಅಪ್ಡೇಟ್ಸ್‌

ಬಿದ್ದು ಹೊರಳಾಡುತ್ತಿದ್ದ ಪುಟಿನ್‌: ಬಹುಶಃ, ಪುಟಿನ್‌ ಬಿದ್ದಾಗ, ಟೇಬಲ್ ಮತ್ತು ಅದರ ಮೇಲಿದ್ದ ಆಹಾರ, ಡ್ರಿಂಕ್ಸ್‌ ಬಾಟಲಿಗಳು ಟೇಬಲ್‌ನಿಂದ ಕೆಳಗೆ ಬಿದ್ದಿದ್ದವು. ಅದರಿಂದ ದೊಡ್ಡ ಶಬ್ಧ ಉಂಟಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಅಲ್ಲಿಗೆ ಧಾವಿಸಿದಾಗ ಪುಟಿನ್ ನೆಲದ ಮೇಲೆ ಬಿದ್ದು, ನೋವಿನಿಂದ ನರಳುತ್ತಿರುವುದು ಕಂಡುಬಂದಿತು. ಕೂಡಲೇ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು (Putin Doctors) ಕಾರ್ಯಪ್ರವೃತ್ತರಾಗಿ ತುರ್ತು ಚಿಕಿತ್ಸೆ ನೀಡಿದರು. ನಂತರ ಪುಟಿನ್‌ರನ್ನ ಅವರ ನಿವಾಸದಲ್ಲೇ ವಿಶೇಷವಾಗಿ ಸುಸಜ್ಜಿತ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿರುವ ವಿಶೇಷ ಐಸಿಯು ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪ್ರಥಮ ಚಿಕಿತ್ಸೆ ನೀಡಿದ್ದರಿಂದಾಗಿ ಮತ್ತೆ ಅವರ ಹೃದಯ ಆರೋಗ್ಯ ಸ್ಥಿತಿಗೆ ಬಂದಿದೆ ಎಂದು ಟೆಲಿಗ್ರಾಮ್‌ ಚಾನೆಲ್‌ ವರದಿ ಮಾಡಿದೆ. ಇದನ್ನೂ ಓದಿ: ಪುಟಿನ್‌ಗೆ ಅಡುಗೆ ಭಟ್ಟನಾಗಿದ್ದ ಪ್ರಿಗೋಜಿನ್ – ರಷ್ಯಾ ಅಧ್ಯಕ್ಷನ ವಿರುದ್ಧವೇ ತಿರುಗಿ ಬಿದ್ದದ್ದು ಯಾಕೆ?

ಸದ್ಯ ಮೂಲಗಳು ವ್ಲಾಡಿಮಿರ್ ಪುಟಿನ್ ಪ್ರತಿರೂಪ ಸಭೆ ಸಮಾರಂಭದಲ್ಲಿ ಸಕ್ರಿಯವಾಗಿದ್ದಾರೆ ಎಂದು ಹೇಳುತ್ತಿವೆ. ಕಳೆದ ವರ್ಷ ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ, ಪುಟಿನ್ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಕ್ರೆಮ್ಲಿನ್‌ ಮತ್ತೆ ಮತ್ತೆ ಪುಟಿನ್‌ ಆರೋಗ್ಯವಾಗಿದ್ದಾರೆ ಎಂಬುದನ್ನು ಒತ್ತಿ ಹೇಳುತ್ತಿದೆ. ಇದನ್ನೂ ಓದಿ: ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]