ರಷ್ಯಾ ಯೋಧರ ತಾಯಂದಿರ ಬಳಿ ಉಕ್ರೇನ್ ಅಧ್ಯಕ್ಷರ ಮನವಿ ಏನು ಗೊತ್ತಾ?

ಕೀವ್: ಉಕ್ರೇನ್ (Ukraine) ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮಂದುವರೆಸಿದೆ. ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ಮಂದಿ ಪ್ರಾಣ ಉಳಿಸಿಕೊಳ್ಳಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಉದ್ವೀಗ್ನ ಪರಿಸ್ಥಿತಿಯ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ (Volodymyr Zelenskyy) ರಷ್ಯಾ ಯೋಧರ ತಾಯಂದಿರ ಬಳಿ ಮನವಿ ಮಾಡಿದ್ದಾರೆ.

ಬಲವಂತಕ್ಕೆ ಒಳಗಾಗಿ ಮಕ್ಕಳನ್ನು ಯುದ್ಧಕ್ಕೆ ಕಳುಹಿಸಿರುವ ತಾಯಂದಿರಿಗೆ ನಾನು ಇದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ. ನಿಮ್ಮ ಮಕ್ಕಳನ್ನು ವಿದೇಶದಲ್ಲಿ ಯುದ್ಧಕ್ಕೆ ಕಳುಹಿಸಬೇಡಿ. ನಮ್ಮ ದೇಶದ ಮೇಲೆ ನಡೆಯುತ್ತಿರುವ ಯುದ್ಧದಲ್ಲಿ ಭಾಗವಹಿಸದಂತೆ ನಿಮ್ಮ ಮಕ್ಕಳನ್ನು ತಡೆಯಿರಿ ಎಂದು ಟೆಲಿಗ್ರಾಮ್‍ನಲ್ಲಿ ಬಿಡುಗಡೆ ಮಾಡಿದ ವೀಡಿಯೋ ಸಂದೇಶದಲ್ಲಿ ಝೆಲೆನ್‍ಸ್ಕಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ: ಉಕ್ರೇನ್ ಅಧ್ಯಕ್ಷ

ನಿಮ್ಮ ಮಗ ಎಲ್ಲಿದ್ದಾನೆ? ಎಂಬುದನ್ನು ಖಾತರಿ ಮಾಡಿಕೊಳ್ಳಿ. ಮಗನನ್ನು ಉಕ್ರೇನ್ ವಿರುದ್ಧ ಯುದ್ಧಕ್ಕೆ ಕಳುಹಿಸಬಹುದೆಂಬ ಸಣ್ಣದೊಂದು ಅನುಮಾನವಿದ್ದರೂ, ಸಹ ಅವನನ್ನು ಕೊಲ್ಲುವುದು, ಸೆರೆಹಿಡಿಯುವುದನ್ನು ತಡೆಯಲು ತಕ್ಷಣವೇ ಕಾರ್ಯಪ್ರವೃತ್ತರಾಗಿ ಎಂದು  ಹೇಳಿದ್ದಾರೆ.

ಉಕ್ರೇನ್‍ನಲ್ಲಿ ರಾಸಾಯನಿಕ ಮತ್ತು ಜೈವಿಕ ಆಯುಧಗಳಿಗೆ ಸಂಬಂಧಿಸಿದ ಪ್ರಯೋಗಗಳು ನಡೆಯುತ್ತಿವೆ. ಚೆರ್ನೋಬಿಲ್ ರಿಯಾಕ್ಟರ್‍ನಲ್ಲಿ ಅಣು ಆಯುಧ ತಯಾರಿಸುತ್ತಿದೆ ಎಂಬ ಗಂಭೀರ ಆಪಾದನೆಯನ್ನು ರಷ್ಯಾ ಮಾಡಿದೆ. ಆದರೆ ಈ ಆರೋಪಗಳನ್ನು ಉಕ್ರೇನ್ ಅಧ್ಯಕ್ಷ ಝೆಲೆನ್‍ಸ್ಕಿ ತಳ್ಳಿ ಹಾಕಿದ್ದಾರೆ. ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ, ನಮ್ಮ ದೇಶದಲ್ಲಿ ಸಾಮೂಹಿಕ ನರಮೇಧಕ್ಕೆ ಸಂಬಂಧಿಸಿದ ಯಾವುದೇ ಶಸ್ತ್ರಾಸ್ತಗಳನ್ನು ಯಾವತ್ತಿಗೂ ತಯಾರಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *