ಠಾಣೆಯಲ್ಲೇ ಪೊಲೀಸರ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿ ಆರೋಪಿ ಪರಾರಿ- ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ

ಭೋಪಾಲ್: ಬಂಧಿತ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಇಬ್ಬರ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಘಟನೆ ಮಧ್ಯಪ್ರದೇಶದ ಠಾಣೆಯಲ್ಲಿ ನಡೆದಿದೆ.

ಭಾನುವಾರ ಈ ಘಟನೆ ನಡೆದಿದ್ದು, ವಿಷ್ಣು ರಾಜಾವತ್ ಎಂಬವನು ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಪೊಲೀಸರು ಶಾಂತಿ ಕದಡಿದ ಕಾರಣಕ್ಕಾಗಿ ವಿಷ್ಣು ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದರು. ಆದರೆ ವಿಷ್ಣು ಸ್ನೇಹಿತನೊಂದಿಗೆ ಸೇರಿ ಠಾಣೆಯಲ್ಲಿ ಕೆಲಸದಲ್ಲಿ ಮಗ್ನರಾಗಿದ್ದ ಇಬ್ಬರು ಪೊಲೀಸ್ ಪೇದೆಯ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ನಡೆದ ಕೆಲ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.

ಈ ಎಲ್ಲಾ ದೃಶ್ಯಗಳು ಠಾಣೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಯ ಹೊಡೆತಕ್ಕೆ ಪೇದೆಯೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಮುಖ್ಯ ಪೇದೆ ಉಮೇಶ್ ಬಾಬು ಕೃತ್ಯವನ್ನು ತಡೆಯಲು ಹೋಗಿದ್ದು ಅವರ ಮೇಲೂ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನೊಬ್ಬರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ವರಿಷ್ಠ ಪೊಲೀಸ್ ಅಧಿಕಾರಿ ರುಡಾಲ್ಫ ಅಲ್ವರೆಜ್ ತಿಳಿಸಿದ್ದಾರೆ.

ಏನಿದು ಪ್ರಕರಣ?
ಭಾನುವಾರ ಪೊಲೀಸರು ಭಿನ್ಡ್ ಜಿಲ್ಲೆಯಿಂದ ರಾಜಾವತ್ ಮತ್ತು ಆತನ ಸ್ನೇಹಿತ ಮಾನ್ಸಿಂಗ್ ನನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. ಆರೋಪಿಗಳನ್ನು ಲಾಕಪ್‍ನಲ್ಲಿ ಇರಿಸದೇ ಹೊರಗೆ ಕುರಿಸಿದ್ದರು. ಈ ವೇಳೆ ಆರೋಪಿಗಳು ಯಾರು ಹಿರಿಯ ಪೊಲೀಸರು ಇಲ್ಲದೇ ಇರುವ ಸಮಯ ನೋಡಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಇಬ್ಬರ ಮೇಲೂ ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಶಾಂತಿ ಕದಡುವಿಕೆ ಹಾಗೂ ಪೊಲೀಸ್ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಆಪಾದನೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *