ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು – ವಿಡಿಯೋ ನೋಡಿ

ರಾಮನಗರ: ಎಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಹೆದ್ದಾರಿಯಲ್ಲಿಯೇ ಕಾರೊಂದು ಹೊತ್ತಿ ಉರಿದ ಘಟನೆ ರಾಮನಗರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಾಮನಗರದ ಪ್ರೇಮ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಎಸ್ಟೀಮ್ ಕಾರ್ ಬೆಂಕಿಯಿಂದ ಸಂಪೂರ್ಣವಾಗಿ ಭಸ್ಮವಾಗಿದೆ. ಎಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿ ನೋಡು ನೋಡುತ್ತಿದ್ದಂತೆ ಸಂಪೂರ್ಣವಾಗಿ ಕಾರನ್ನು ಆವರಿಸಿದೆ. ಸುಮಾರು 15 ನಿಮಿಷಗಳ ಕಾಲ ಕಾರು ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ.

ಕಾರಿನಲ್ಲಿ ಗ್ಯಾಸ್ ಸಿಲಿಂಡರ್ ಇದೆ ಎಂದು ಜನರು ಭಯಬೀತರಾಗಿದ್ರು. ಆನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರ್ ಗೆ ಬೆಂಕಿ ಹೊತ್ತಿ ಉರಿದ ವೇಳೆ ಕೆಲಕಾಲ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು

https://youtu.be/vBj1GLp5Tz8

 

Comments

Leave a Reply

Your email address will not be published. Required fields are marked *