ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ: ಭೂತಾನ್ ಪ್ರಧಾನಿ

ಬೆಂಗಳೂರು: ಭೂತಾನ್ ಪ್ರಧಾನಿ ಲೋಟೆ ತ್ಸೆರಿಂಗ್ ಇಂದು ನನಗೆ ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-2 ಕೈಗೊಂಡ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ದೇಶ ಮಾತ್ರವಲ್ಲದೇ ವಿಶ್ವದೆಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್, ಪೋಸ್ಟ್ ಮಾಡುವ ಮೂಲಕ ಇಸ್ರೋ ವಿಜ್ಞಾನಿಗಳನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಮೋದಿ ಆಲಂಗಿಸಿ ಕಣ್ಣೀರಿಟ್ಟ ಶಿವನ್

ಭೂತಾನ್ ಪಿಎಂ ಟ್ವೀಟ್:
ಭಾರತ ಮತ್ತು ಅಲ್ಲಿಯ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ. ಹಲವು ಸವಾಲುಗಳನ್ನು ಎದುರಿಸಿ ಭಾರತೀಯ ವಿಜ್ಞಾನಿಗಳು ಚಂದ್ರಯಾನ-2 ಪಯಣ ಆರಂಭಿಸಿದ್ದರು. ಕೊನೆ ಕ್ಷಣದವರೆಗೂ ವಿಜ್ಞಾನಿಗಳ ಶ್ರಮ ಮತ್ತು ಧೈರ್ಯ ಇತಿಹಾಸದಲ್ಲಿ ದಾಖಲಾಗಲಿದೆ. ಮುಂದಿನ ದಿನಗಳಲ್ಲಿ ಭಾರತ ತನ್ನ ಗುರಿ ತಲುಪಲಿದೆ ಎಂಬ ವಿಶ್ವಾಸ ನನಗಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಇಡೀ ಭಾರತ ಇಸ್ರೋ ಜೊತೆಗಿದೆ: ಮೋದಿ

ಭೂತಾನ್ ಪ್ರಧಾನಿಗಳ ಟ್ವೀಟ್ ಗೆ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿ ರೀಟ್ವೀಟ್ ಮಾಡಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಭಾರತ ತನ್ನ ಕನಸನ್ನು ನನಸು ಮಾಡಿಕೊಳ್ಳುವ ಮಾರ್ಗದಲ್ಲಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇದೂವರೆಗೂ 10 ಸಾವಿರಕ್ಕೂ ಅಧಿಕ ರೀಟ್ವೀಟ್, 41 ಸಾವಿರಕ್ಕೂ ಹೆಚ್ಚು ಲೆಕ್ಸ್ ಟ್ವೀಟ್ ಪಡೆದುಕೊಂಡಿದೆ. ಇದನ್ನೂ ಓದಿ: ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

Comments

Leave a Reply

Your email address will not be published. Required fields are marked *