ಶೀಘ್ರವೇ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಪುನೀತ್ ನಿರ್ಮಾಣದ 3 ಸಿನಿಮಾಗಳು

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಪಿಆರ್ ಕೆ ಸಂಸ್ಥೆಯನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮೂಲಕ ಅಶ್ವಿನಿ ಅವರು ಅಪ್ಪು ಅವರ ಕನಸುಗಳನ್ನು ನನಸು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ.

ಹೌದು. ಅಶ್ವಿನಿ ಅವರು ಪುನೀತ್ ನಿರ್ಮಾಣದ ಮೂರು ಸಿನಿಮಾಗಳು ಶೀಘ್ರವೇ ನಿಮ್ಮ ಮುಂದೆ ಬರಲಿದೆ ಎಂದು ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಃ ಅಶ್ವಿನಿ ಅವರೇ ತಮ್ಮ ಸೋಶಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ‘ಗರುಡ ಗಮನ ವೃಷಭ ವಾಹನ’ಕ್ಕೆ ನಟ ರಾಣಾ ಫಿದಾ

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅಶ್ವಿನಿ, ಅಪ್ಪುವಿನ ಕನಸನ್ನು ಮುಂದಿಟ್ಟುಕೊಂಡು ಪ್ರೀತಿ, ಜೀವನ ಮತ್ತು ಸಂತೋಷದಿಂದ ತುಂಬಿರುವ 3 ಕಥೆಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

ಪವರ್ ಸ್ಟಾರ್ ಅವರು ನಟನೆಯ ಜೊತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಅದಕ್ಕಾಗಿಯೇ ಪಿಆರ್‍ಕೆ ಸಂಸ್ಥೆಯೊಂದನ್ನು ಸ್ಥಾಪಿಸಿ 4 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಅದರಲ್ಲಿ ಇದೀಗ ‘ಒನ್ ಕಟ್ ಟೂ ಕಟ್’, ‘ಫ್ಯಾಮಿಲಿ ಪ್ಯಾಕ್’, ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾಗಳು ಅಮೇಜಾನ್ ಪ್ರೈಮ್ ನಲ್ಲಿ ಶೀಘ್ರವೇ ಬಿಡುಗಡೆಯಾಗಲಿವೆ. ವಾರಕ್ಕೆ ಒಂದರಂತೆ ಮೂರು ಚಿತ್ರಗಳು ಪ್ರೀಮಿಯರ್ ಆಗುತ್ತಿವೆ ಎಂಬುದಾಗಿ ತಿಳಿದುಬಂದಿದೆ.

Comments

Leave a Reply

Your email address will not be published. Required fields are marked *