ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ಗೆ ಆಂಧ್ರ ಮೂಲದ ಹುಡುಗಿಯೊಂದಿಗೆ ವಿವಾಹ ಮಾಡಲು ಮಾತುಕತೆ ನಡೆದಿದೆ ಎಂಬ ಸುದ್ದಿಗೆ ಇಂದು ಮತ್ತೊಂದು ಟ್ವಿಸ್ಟ್ ದೊರೆತಿದೆ.

ಶುಕ್ರವಾರ ಕುಮಾರಸ್ವಾಮಿ ದಂಪತಿ ಆಂಧ್ರದ ಉದ್ಯಮಿ ಬೋಡಪುಡಿ ಶಿವ ಕೋಟೇಶ್ವರ್ ರಾವ್ ಮನೆಗೆ ಹೋಗಿದ್ದರು. ವಿಜಯವಾಡದಲ್ಲಿರುವ ಉದ್ಯಮಿಯ ಮನೆಗೆ ಹೋಗಿ ದಂಪತಿ ಮದ್ವೆ ಮಾತುಕತೆ ನಡೆಸಿದ್ದರು. ಆದ್ರೆ ಈ ಸಂಬಂಧ ಅನಿತಾ ಕುಮಾರಸ್ವಾಮಿಗೆ ಇಷ್ಟನೇ ಇರಲಿಲ್ಲ. ಆದ್ರೆ ಮನೆಗೆ ಬರ್ತಿವಿ ಅಂತ ಕುಮಾರಸ್ವಾಮಿ ಮೊದಲೇ ಹುಡುಗಿ ಮನೆಯವರಿಗೆ ಮಾತು ಕೊಟ್ಟಿದ್ದರು. ಕೊಟ್ಟ ಮಾತು ಉಳಿಸಿಕೊಳ್ಳಲು ಅನಿವಾರ್ಯವಾಗಿ ಕುಮಾರಸ್ವಾಮಿ ದಂಪತಿ ಹುಡುಗಿ ಮನೆಗೆ ಹೋಗಿದ್ದರು. ಮಾತುಕತೆ ವೇಳೆ ಅನಿತಾ ಕುಮಾರಸ್ವಾಮಿ ಅವರು `ನಮಗೆ ಈ ಸಂಬಂಧ ಇಷ್ಟ ಇಲ್ಲ’ ಅಂತ ಹುಡುಗಿ ಮನೆಯವರಿಗೆ ತಿಳಿಸಿದ್ದಾರೆ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಇತ್ತ ಮದ್ವೆ ಮಾತುಕತೆ ಸುದ್ದಿಯ ಬಗ್ಗೆ ಪುತ್ರ ನಿಖಿಲ್ ತಾಯಿ ಬಳಿ ವಿಚಾರಿಸಿದ್ದಾರೆ. ಈ ವೇಳೆ `ಕರ್ನಾಟಕ ಬಿಟ್ಟು ಬೇರೆ ಕಡೆಯಿಂದ ಹೆಣ್ಣು ತರಲ್ಲ, ತಲೆಕೆಡಿಸಿಕೊಳ್ಳಬೇಡ’ ಅಂತ ಅನಿತಾ ಅವರು ತಮ್ಮ ಪುತ್ರನಿಗೆ ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಂಧ್ರ ಅಲ್ಲ, ಕನ್ನಡದ ಹುಡುಗಿಯನ್ನೇ ವರಿಸಲಿದ್ದಾರೆ ನಿಖಿಲ್

ನಿನ್ನೆ ನಿಖಿಲ್ ಅವರಿಗೆ ಹುಡುಗಿ ನೋಡುವುದಕ್ಕಾಗಿ ಸಿಎಂ ದಂಪತಿ ಆಂಧ್ರಕ್ಕೆ ತೆರಳಿದ್ದರು ಎಂಬ ಸುದ್ದಿಯ ಬೆನ್ನಲ್ಲೇ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ನಿಖಿಲ್ ಅವರ ಮ್ಯಾನೇಜರ್, ಈ ಕುರಿತು ಶೀಘ್ರವೇ ಅಧಿಕೃತವಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಲಿದ್ದಾರೆ. ಆದರೆ ನಿಖಿಲ್ ಅವರು ಆಂಧ್ರ ಹುಡುಗಿಯನ್ನು ಮದುವೆಯಾಗಲಿದ್ದಾರೆ ಎನ್ನುವುದು ಸುಳ್ಳು. ಅವರು ಕನ್ನಡ ಹುಡುಗಿಯನ್ನೇ ಮದುವೆಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

ಈ ವೇಳೆ ಆಂಧ್ರ ಪ್ರದೇಶದ ಖ್ಯಾತ ಉದ್ಯಮಿ ಬೋಡೆಪುಡಿ ಶಿವ ಕೋಟೇಶ್ವರ ರಾವ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ಕುಮಾರಸ್ವಾಮಿ ಅವರು ನಾವು ಸ್ನೇಹಿತರಾಗಿದ್ದು, ಸಹಜವಾಗಿ ಇಂದು ಮನೆಗೆ ಭೇಟಿ ನೀಡಿದ್ದಾರೆ. ನಿಖಿಲ್‍ರೊಂದಿಗೆ ಮದುವೆಯ ಸುದ್ದಿ ಬಗ್ಗೆ ಈ ವೇಳೆ ಚರ್ಚೆ ನಡೆದಿಲ್ಲ. ಸ್ನೇಹಿತರಾದ ಕಾರಣಕ್ಕೆ ಮಾತ್ರ ಭೇಟಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=yCWzT5DwKiM

https://www.youtube.com/watch?v=gRdK_wrERMI

Comments

Leave a Reply

Your email address will not be published. Required fields are marked *