ಬೆಂಗಳೂರು: ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಧಾರವಾಡ ಹೈಕೋರ್ಟ್ (Dharwad High Court) ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್
ಇದೇ ವೇಳೆ ಮಾತನಾಡಿದ ಗೃಹಸಚಿವ ಪರಮೇಶ್ವರ್, ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದೆ. ಸಿಎಂ ಕೂಡಾ ಹೇಳಿದ್ದಾರೆ, ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು
