ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ- ಜನಾರ್ದನ ರೆಡ್ಡಿ ಪರ ವಕೀಲ

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಮೇಲೆ ಇರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾಗಿದ್ದಾಗಿದ್ದು, ಅಂಬಿಡೆಂಟ್ ಕಂಪನಿ ಜೊತೆ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಮ್ಮ ಸಂಪೂರ್ಣ ಸಹಕಾರವಿದೆ ಅಂತ ವಕೀಲ ಚಂದ್ರಶೇಖರ್ ತಿಳಿಸಿದ್ದಾರೆ.

4 ದಿನಗಳ ಬಳಿಕ ಜನಾರ್ದನ ರೆಡ್ಡಿ ಅವರು ಇಂದು ತಮ್ಮ ವಕೀಲರೊಂದಿಗೆ ಸಿಸಿಬಿ ಕಚೇರಿಗೆ ತೆರಳಲಿದ್ದಾರೆ. ವಕೀಲ ಚಂದ್ರಶೇಖರ್ ಮಾತನಾಡಿ, ಅಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಜನಾರ್ದನ ರೆಡ್ಡಿಯವರ ಹೆಸರನ್ನು ಪ್ರಸ್ತಾಪಿಸಿದ್ದರು. ಅಲ್ಲದೇ ಅದೇ ಪೊಲೀಸ್ ಪ್ರಕಟಣೆಯಲ್ಲಿ ರೆಡ್ಡಿ ವಿರುದ್ಧ ಕೆಲವೊಂದು ಆರೋಪಗಳನ್ನು ಕೂಡ ಮಾಡಿದ್ದರು. ಆದ್ರೆ ಅವೆಲ್ಲವೂ ಸತ್ಯಕ್ಕೆ ದೂರವಾದದ್ದಾಗಿದೆ ಅಂತ ಸ್ಪಷ್ಟಪಡಿಸಿದ್ರು.

ವಿನಾಕಾರಣ ಸಿಸಿಬಿಯವರು ಜನಾರ್ದನ ರೆಡ್ಡಿ ಮೇಲೆ ಆರೋಪ ಮಾಡಿದ್ದಾರೆ. ಆದ್ರೆ ಸಿಸಿಬಿ ನೋಟಿಸ್ ಜಾರಿ ಮಾಡಲಿಲ್ಲ. ಹೀಗಾಗಿ ನೀವು ನೋಟೀಸ್ ಜಾರಿ ಮಾಡಿ ಅಂತ ಕೇಳಿಕೊಂಡಿದ್ದೆವು. ನೋಟಿಸ್ ಜಾರಿ ಮಾಡದೇ ನಾವು ವಿಚಾರಣೆಗೆ ಹಾಜರಾಗುವುದು ಹೇಗೆ ಅಂತ ಪ್ರಶ್ನಿಸಿದ್ದೆವು. ಹೀಗಾಗಿ ಇದೀಗ ಸಿಸಿಬಿ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಸದ್ಯ ನಾವು ಸಿಸಿಬಿಗೆ ಹಾಜರಾಗುತ್ತೇವೆ. ಈ ಕೇಸ್ ನಲ್ಲಿ ಪ್ರತಿ ಹಂತದಲ್ಲಿಯೂ ವಿಚಾರಣೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ. ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಅಂತ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *