ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್

ಬೆಂಗಳೂರು: ಪೊಲೀಸ್ ಹುದ್ದೆಗಳ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ನಿಯಮ ಪ್ರಕಟಿಸುವುದಾಗಿ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮವಾರ (ಸೆ.29) ಸರ್ಕಾರಿ ಹುದ್ದೆಗೆ ಅರ್ಜಿ ಹಾಕುವ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಅದು ಒಂದು ಸಲಕ್ಕೆ ಮಾತ್ರ ಅನ್ವಯವಾಗುವಂತೆ 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ಆದರೆ ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತವಾಗಿ ವಯೋಮಿತಿ ಸಡಿಲಿಕೆ ಕೊಡಲು ಮುಂದಾಗಿದ್ದೇವೆ ಎಂದರು.ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್- ನೇಮಕಾತಿಗಳಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ

ಇದಕ್ಕೆ ಸಿಅ್ಯಂಡ್‌ಆರ್ ನಿಯಮಗಳಿಗೆ ತಿದ್ದುಪಡಿ ತಂದು ಶಾಶ್ವತವಾಗಿ ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡ್ತೇವೆ. ಇದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎಂದು ಮಾಹಿತಿ ತರಿಸಿಕೊಂಡಿದ್ದೇವೆ. ಸದ್ಯದಲ್ಲೇ ಪೊಲೀಸ್ ಹುದ್ದೆಗಳ ನೇಮಕಾತಿಗಳಿಗೆ ವಯೋಮಿತಿ ಸಡಿಲಿಕೆ ಪ್ರಕಟ ಮಾಡ್ತೇವೆ ಎಂದು ಹೇಳಿದರು.