ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

ಚೆನ್ನೈ; ಟಿವಿಕೆ (TVK) ಪಕ್ಷ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ, ಡಿಎಂಕೆ (DMK) ಹಾಗೂ ಬಿಜೆಪಿ (DMK) ಯಾವ ಪಕ್ಷದ ಜೊತೆಗೂ ಕೈಜೋಡಿಸಲ್ಲ ಎಂದು ನಟ, ರಾಜಕಾರಣಿ ತಮಿಳಿಗ ವೆಟ್ರಿ ಕಳಗಂ (Tamilaga Vettri Kazhagam) ಪಕ್ಷದ ಮುಖ್ಯಸ್ಥ ವಿಜಯ್ (Vijay) ಘೋಷಣೆ ಮಾಡಿದ್ದಾರೆ.

ಮಧುರೈ (Madhurai) ಜಿಲ್ಲೆಯ ಪರಪತಿಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷ ಡಿಎಂಕೆ ಹಾಗೂ ಬಿಜೆಪಿ ನಡುವೆ ಹೋರಾಡಲಿದೆ. ಡಿಎಂಕೆ ನಮಗೆ ರಾಜಕೀಯ ಬದ್ದ ವೈರಿ, ಬಿಜೆಪಿಯ ಜೊತೆಗೂ ಕೈಜೋಡಿಸಲ್ಲ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ತಮಿಳುನಾಡಿನಲ್ಲಿರುವ 234 ಕ್ಷೇತ್ರಗಳಲ್ಲಿಯೂ ಟಿವಿಕೆ ಪಕ್ಷ ಸ್ಪರ್ಧಿಸಲಿದೆ. ನಾನು ಪೂರ್ವ ಮಧುರೈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಡಿಎಂಕೆ ಸರ್ಕಾರವು ಚುನಾವಣೆ ಪೂರ್ವದಲ್ಲಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬುಧವಾರದಿಂದ (ಆ.20) ನಡೆಯುತ್ತಿರುವ ಈ ಸಮಾವೇಶದಲ್ಲಿ ಮೊದಲ ದಿನವೇ ಕಾಲ್ತುಳಿತ ಉಂಟಾಗಿ, ಓರ್ವ ಸಾವನ್ನಪ್ಪಿದ್ದಾನೆ. ಜೊತೆಗೆ ಕ್ರೇನ್ ಕಟ್ಟಾಗಿ ಧ್ವಜಸ್ತಂಭ ಬಿದ್ದು, ಕಾರೊಂದು ಜಖಂ ಆಗಿದೆ.ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ