ಪಾಕಿಸ್ತಾನಿಯರ ಹೃದಯ ಗೆಲ್ಲಿ-ಗಂಗೂಲಿ ಪಡೆಗೆ ಕಿವಿಮಾತು ಹೇಳಿದ್ದ ಅಟಲ್‍ಜೀ

ನವದೆಹಲಿ: ಪಾಕಿಸ್ತಾನ ಹಾಗೂ ಭಾರತ ನಡುವೆ ಕ್ರೀಡೆ ಮೂಲಕ ಸ್ನೇಹ ಸಂಬಂಧ ಉತ್ತಮ ಪಡಸಿಲು ಪ್ರಯತ್ನಿಸಿದ್ದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಟೀಂ ಇಂಡಿಯಾ ತಂಡ ಪ್ರವಾಸ ಕೈಗೊಳ್ಳುವ ಮುನ್ನ ತಂಡಕ್ಕೆ ಪಾಕ್ ಪ್ರಜೆಗಳ ಹೃದಯ ಗೆಲ್ಲಲು ಹೇಳಿ ಕಳುಹಿಸಿದ್ದರು.

2004 ರಲ್ಲಿ 19 ವರ್ಷಗಳ ಬಳಿಕ ಅಟಲ್ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಈ ವೇಳೆ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾಕ್ ಪ್ರವಾಸಕ್ಕೆ ತೆರಳುವ ಮುನ್ನ ತಂಡದ ಆಟಗಾರರು ಭೇಟಿ ಮಾಡಿದ್ದರು. ಈ ವೇಳೆ ಅಟಲ್ ಅವರು ಟೀಂ ಇಂಡಿಯಾಗೆ ಗೆಲುವು ಒಂದೇ ನಮ್ಮ ಉದ್ದೇಶವಲ್ಲ, ಹೃದಯ ಗೆಲ್ಲುವುದು ಕೂಡ ನಮ್ಮ ಉದ್ದೇಶ ಎಂದು ಹೇಳಿದ್ದರು. ಅಲ್ಲದೇ ನಾಯಕ ಸೌರವ್ ಗಂಗೂಲಿ ಅವರಿಗೆ ವಿಶೇಷ ಬ್ಯಾಟ್ ಸಹ ಗಿಫ್ಟ್ ನೀಡಿದ್ದರು.

ಈ ವೇಳೆ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ವೀಕ್ಷಿಸಲು ಸುಮಾರು 20 ಸಾವಿರ ವೀಸಾಗಳನ್ನು ಸರ್ಕಾರ ನೀಡಿತ್ತು. ಅಂದು ತಂಡದಲ್ಲಿ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಯುವರಾಜ್ ಸಿಂಗ್, ಕೈಫ್, ಜಹೀರ್ ಖಾನ್ ರಂತಹ ಸ್ಟಾರ್ ಆಟಗಾರು ಸ್ಥಾನ ಪಡೆದಿದ್ದರು. ಈ ಸರಣಿಯಲ್ಲಿ ಭಾರತ ಏಕದಿನ ಹಾಗೂ ಟೆಸ್ಟ್ ಟೂರ್ನಿಯನ್ನು ಕ್ರಮವಾಗಿ 3-2, 2-1 ಅಂತರದಿಂದ ಗೆದ್ದಿತ್ತು.

ಪಾಕಿಸ್ತಾನದೊಂದಿಗೆ ಸ್ನೇಹ ಸಂಬಂಧ ಸುಧಾರಿಸಲು ಎಲ್ಲಾ ಮಾರ್ಗಗಳಲ್ಲೂ ಪ್ರಯತ್ನಿಸಿದ್ದ ಮಾಜಿ ಪ್ರಧಾನಿ, ಅಜಾತಶತ್ರು ಮತ್ತು ಭಾರತರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯಿಂದ ದೇಶದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಗಣ್ಯಾತಿ ಗಣ್ಯರು ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸುತ್ತಿದ್ದಾರೆ.

ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಈ ವೇಳೆ ಬಂಧು ಮಿತ್ರರು ಮತ್ತು ಗಣ್ಯರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಜೆಪಿ ಮುಖಂಡ ಹಾಗೂ ವಾಜಪೇಯಿ ಅವರ ಆಪ್ತ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Comments

Leave a Reply

Your email address will not be published. Required fields are marked *