ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

ಬೆಂಗಳೂರು: ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ (Chief Minister) ಮುಡಾ ಟ್ರ್ಯಾಪ್, ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್… ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್‌ನಲ್ಲಿರುವ ಉಳಿಕೆ ಕಾಂಗ್ರೆಸ್‌ ನಾಯಕರನ್ನ ದೇವರೇ ರಕ್ಷಣೆ ಮಾಡಬೇಕು ಅಂತ ಜೆಡಿಎಸ್‌ ಯುವನಾಯಕ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕುಟುಕಿದ್ದಾರೆ.

ಜೆಡಿಎಸ್‌ನಲ್ಲಿ ಭವಿಷ್ಯ ಇಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

ನಿಖಿಲ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಡಿ.ಕೆ ಶಿವಕುಮಾರ್‌ ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ. ಇದನ್ನೂ ಓದಿ: ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

ನಿಮ್ಮನ್ನ ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನ ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ. ಇದನ್ನೂ ಓದಿ: ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ಈ ರಾಷ್ಟ್ರ ಕಂಡ ಅಪರೂಪದ ನಾಯಕರಾದ ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.