ಈಕೆ ಯಾರು? ಸಾಧನೆ ಏನು? ಕನ್ನಡ ಬಾರದ ಕಾಡುಪಾಪ- ಮೋದಿ ಕಾಲೆಳೆದ ರಮ್ಯಾ ವಿರುದ್ಧ ಜಗ್ಗೇಶ್ ಕಿಡಿ

ಬೆಂಗಳೂರು: ಮೋದಿ ಭಾಷಣದ ಬಳಿಕ ಟಿಟ್ವರ್‍ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವಿನ ವಾರ್ ತೀವ್ರಗೊಂಡಿದೆ. ನಶೆಯಲ್ಲಿದ್ದಾಗ ಹೀಗೆಲ್ಲಾ ಆಗುತ್ತೆ ಎಂದು ಕೇಳುವ ಮೂಲಕ ನಟಿ, ಮಾಜಿ ಸಂಸದೆ ರಮ್ಯಾ ಪ್ರಧಾನಿ ಮೋದಿಯ ಕಾಲೆಳೆದಿದ್ದು, ಇದಕ್ಕೆ ನಟ ಜಗ್ಗೇಶ್ ರಮ್ಯಾ ವಿರುದ್ಧ ಕಿಡಿ ಕಾರಿದ್ದಾರೆ.

ಭಾಷಣದಲ್ಲಿ ರೈತರು ತಮ್ಮ ಟಾಪ್ ಆದ್ಯತೆ ಎಂದು ಮೋದಿ ಹೇಳಿದ್ದರು. ಟಾಪ್ ಎಂದರೆ ಟೊಮೆಟೋ, ಈರುಳ್ಳಿ, ಪೊಟಾಟ್ಯೋ ಎಂದು ವಾಖ್ಯಾನಿಸಿದ್ದರು. ಇದನ್ನೇ ಉಲ್ಲೇಖಿಸಿದ ರಮ್ಯಾ ಟಾಪ್ ನನ್ನು ಉಲ್ಟಾ ಬರೆದು ಪಾಟ್ ಮಾಡಿದ್ದರು. ಪಾಟ್ ಎಂದರೆ ಮಾದಕ ದ್ರವ್ಯ. ಮರಿಜುನಾ ಮಾದಕ ದ್ರವ್ಯ ಗಿಡಕ್ಕೆ ಪಾಟ್ ಎನ್ನುವ ಹೆಸರೂ ಇದೆ.

 

ಪದಪುಂಜ ಬಿಡಿಸೋದು ಬಿಟ್ಟರೆ ಪ್ರಧಾನಿ ರೈತರ ಬಗ್ಗೆ ಏನೂ ಮಾಡಿಲ್ಲ. ಕರ್ನಾಟಕದಲ್ಲಿ 3,500 ರೈತರು ಸಾವನ್ನಪ್ಪಿದ್ದರೂ ಗುಜರಾತ್, ಆಂಧ್ರ, ರಾಜಸ್ಥಾನ, ತಮಿಳುನಾಡಿಗೆ ಹೆಚ್ಚು ಪರಿಹಾರ ಕೊಟ್ಟಿರೋ ಮೋದಿ ಸರ್ಕಾರ ಕರ್ನಾಟಕಕ್ಕೆ ಅತ್ಯಂತ ಕಡಿಮೆ ಬರ ಪರಿಹಾರ ಕೊಟ್ಟಿದೆ. ಸಿದ್ದರಾಮಯ್ಯ 1,165 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರೆ, ಮೋದಿ ಸರ್ಕಾರ ಮಾಡಿರೋ ಸಾಲ ಮನ್ನಾ ಸೊನ್ನೆ ಎಂದು ರಮ್ಯಾ ತಿರುಗೇಟು ನೀಡಿದ್ದರು.

ರಮ್ಯಾ ಟ್ವೀಟ್‍ಗೆ ನವರಸನಾಯಕ ಜಗ್ಗೇಶ್ ಪ್ರತಿಕ್ರಿಯಿಸಿ, ದೊಡ್ಡವರ ಬಗ್ಗೆ ಮಾತಡಬೇಕಾದರೆ ಮಾತಾಡುವ ಮಂದಿಗೆ ವಯಸ್ಸು, ಅನುಭವ, ಸಾಧನೆ ಮಾಡಿ ಪಕ್ವವಾದಾಗ ಅಪಭ್ರಂಷ ಇಲ್ಲದೆ ಚರ್ಚೆ ಮಾಡಿದರೆ ಅದನ್ನ ತರ್ಕ ಎಂದು ಒಪ್ಪಿ ವಿಮರ್ಷೆ ನಿರ್ಣಯಸುತ್ತಾರೆ ಜನ. ವಿಶ್ವದ ಬಲಿಷ್ಟ ರಾಷ್ಟ್ರದ ನಾಯಕರೇ ಮೋದಿ ಅವರನ್ನ ಒಪ್ಪಿ ಮೆಚ್ಚದ್ದಾರೆ. ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪದಂತೆ ಈಕೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *