ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

ಮಂಡ್ಯ: ಇಲ್ಲಿನ ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಬಹಿರಂಗವಾಗಿ ಸಿಟ್ಟು ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಗೆ ಐಪಿಎಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ.

ನಿನ್ನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಬರುವಾಗ ಬಿಜೆಪಿ ಕಾರ್ಯಕರ್ತರು ಸಿಎಂ ಕಾರನ್ನು ಅಡ್ಡ ಹಾಕಲು ಯತ್ನಿಸಿದ್ರು. ಇದ್ರಿಂದ ಕುಪಿತಗೊಂಡ ಸಿಎಂ `ನಿನಗ್ಯಾರು ಐಪಿಎಸ್ ಕೊಟ್ಟಿದ್ದು’? ಎಂದು ಸಾರ್ವಜನಿಕವಾಗಿ ಬೈದು, ಗೆಟ್‍ಔಟ್ ಅಂತಾ ಹೇಳಿದ್ರು.

ಸಿಎಂ ಸಿದ್ದರಾಮಯ್ಯರ ಈ ರೀತಿಯ ನಡವಳಿಕೆ ಸರಿಯಲ್ಲ ಅಂತಾ ಹಿರಿಯ ಐಪಿಎಸ್ ಅಧಿಕಾರಿಗಳ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ ವರ್ತನೆಯಿಂದ ದಕ್ಷ ಅಧಿಕಾರಿಗಳ ಮನಸ್ಥೈರ್ಯ ಕುಗ್ಗುತ್ತೆ ಅಂತಾ ಬೇಸರ ವ್ಯಕ್ತಪಡಿಸಿದ್ದಾರೆ.

https://www.youtube.com/watch?v=oSC_YuZcMB0

Comments

Leave a Reply

Your email address will not be published. Required fields are marked *