ಲೋಕಸಭೆಯಲ್ಲಿ ಯಾರು ಬೀದಿಗೆ ಬರ್ತಾರೆ ತೋರಿಸ್ತೀವಿ: ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಬಿಜೆಪಿ (BJP) ನಾಯಕರು ಬೀದಿಗೆ ಬಂದಿದ್ದಾರೆ ಎಂಬ ಕಾಂಗ್ರೆಸ್ (Congress) ಟೀಕೆ ವಿಚಾರವಾಗಿ ಲೋಕಸಭೆಯಲ್ಲಿ ಯಾರು ಬೀದಿಗೆ ಬರುತ್ತಾರೆ ತೋರಿಸುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ (Narendra Modi) ಪ್ರಧಾನಿ ಆಗುವುದೂ ಅಷ್ಟೇ ಸತ್ಯ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶ ಜಗತ್ತಿನಲ್ಲಿ ಬಹಳ ಮುಂದಕ್ಕೆ ಹೋಗಿದೆ. ವಿಜ್ಞಾನದಲ್ಲೂ ಭಾರತ ಮುಂದುವರೆದಿದೆ. ಇವತ್ತು ಮೋದಿ ಮಾಡಿದ ಭಾಷಣ ಎಲ್ಲರೂ ಮೆಚ್ಚಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ 17 ಶಾಸಕರನ್ನು ಸೂರ್ಯ ಚಂದ್ರ ಇರುವವರೆಗೆ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಪಕ್ಷಕ್ಕೆ ಸೇರಿಸಿಕೊಳ್ಳಲು ಗುಂಪು ನಡೆಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೋ ಉಡುಗೊರೆ

ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತ ವಿಚಾರವಾಗಿ ಮಾತನಾಡಿದ ಅವರು, ಯಾರೊಬ್ಬ ಎಂಎಲ್‌ಎ, ಎಂಎಲ್‌ಸಿ ಬಿಜೆಪಿಯಿಂದ ಹೋಗಿದ್ರೆ ತಿಳಿಸಿ. ಜೆಡಿಎಸ್‌ನಿಂದ (JDS) ಹೋದವರ ಬಗ್ಗೆ ನಾನು ಹೇಳಲಾರೆ. ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು. ಕಾಂತೇಶ್ ಹಾವೇರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಸಿ ಪಾಟೀಲ್ ಆತ್ಮೀಯ ಸ್ನೇಹಿತರು. ಅವರ ಜೊತೆ ಕುಳಿತು ಮಾತನಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಕಾಂತೇಶ್ ಹಾವೇರಿಯಲ್ಲಿ (Haveri) ಸ್ಪರ್ಧೆಗೆ ಆಕಾಂಕ್ಷಿಯಾಗಿದ್ದಾನೆ. ಹಾವೇರಿ ಕ್ಷೇತ್ರದ ಎಲ್ಲಾ ತಾಲೂಕುಗಳಲ್ಲಿ ಪ್ರವಾಸ ಮಾಡಿದ್ದಾನೆ. ಅನೇಕರು ಅವನಿಗೆ ಬೆಂಬಲ ಸೂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಮಠಾಧೀಶರೂ ಕೂಡಾ ಬೆಂಬಲಿಸಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೋ ಅವರು ಸ್ಪರ್ಧಿಸುತ್ತಾರೆ. ಕಾಂತೇಶ್ ಏನು ಮೇಲಿನಿಂದ ಬಂದವನಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ: ಕಾಂಗ್ರೆಸ್‌ ಗೇಲಿಗೆ ಬಿಜೆಪಿ ತಿರುಗೇಟು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]