ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

ಬೆಂಗಳೂರು: ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದು ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ನೀಡಿದ್ದಾರೆ.

ಧರಣಿ ಹಾಗೂ ಸುರೇಶ್ ಇಬ್ಬರು ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು ಫೆ.15ರಂದು ಇಬ್ಬರು ಮದುವೆಯೂ ಆಗಿದ್ದರು. ಆದರೆ ಮದುವೆಯಾಗಿ ಮೂರೇ ದಿನಕ್ಕೆ ಪತಿ ಸುರೇಶ್ ಇದ್ದಕ್ಕಿದ್ದಂತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಧರಣಿ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ, ನಾನು ಧರಣಿಯನ್ನು ಮದುವೆಯಾಗಿಲ್ಲ. ನಾವಿಬ್ಬರು ಸ್ನೇಹಿತರಾಗಿದ್ದೆವು. ಅದು ಶಾರ್ಟ್ ಮೂವಿಗಾಗಿ ತೆಗೆದ ಫೋಟೋ ಆಗಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾನೆ. ಅಷ್ಟೇ ಅಲ್ಲದೇ 2016ರಲ್ಲಿ ಧರಣಿಗೆ ಮೊದಲ ವಿವಾಹ ಆಗಿತ್ತು. ನಂತರ ಪತಿಯನ್ನು ಬಿಟ್ಟು ದೂರವಾಗಿದ್ದರು ಎಂದು ಆರೋಪಿಸಿದ್ದಾನೆ. ಇದನ್ನೂ ಓದಿ: ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮದರಸಾ ಸಂಪೂರ್ಣ ಬಂದ್: ಯತ್ನಾಳ್

ಸದ್ಯ ಈ ವಿಚಾರ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

Comments

Leave a Reply

Your email address will not be published. Required fields are marked *