ಹೆಂಡತಿಯನ್ನು ಮನೆಗೆ ಕರೆದಿದ್ದಕ್ಕೆ ಚಾಕು ಇರಿದ ಬಾಮೈದ – ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಪತಿ!

– ಆರೋಪಿ ಪೊಲೀಸ್‌ ವಶಕ್ಕೆ 

ಕಲಬುರಗಿ: ಹೆಂಡತಿಯನ್ನು (Wife) ಮನೆಗೆ ಬಾ ಎಂದು ಕರೆದಿದ್ದಕ್ಕೆ ಬಾಮೈದನಿಂದ ಚಾಕು ಇರಿತಕ್ಕೊಳಗಾಗಿದ್ದ ಪತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಆನಂದ್ ಎಂದು ಗುರುತಿಸಲಾಗಿದೆ. ಆತ ಕಳೆದ ಎರಡು ವರ್ಷದ ಹಿಂದೆ ಗಾಜಿಪುರದ ಸ್ನೇಹಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಡ ಹೆಂಡತಿಯ ಮಧ್ಯೆ ಜಗಳವಾಗಿ ಪತ್ನಿ ತವರು ಮನೆ ಸೇರಿದ್ದಳು. ಆನಂದ್ ತನ್ನ ಅಣ್ಣನ ಮದುವೆ ಹಿನ್ನಲೆಯಲ್ಲಿ ಮನೆಗೆ ಬರುವಂತೆ ಸ್ನೇಹಾಳನ್ನು ಕರೆದಿದ್ದ. ಇದನ್ನೂ ಓದಿ: ಸೀಜ್ ಆಗಿದ್ದ ಹಣಕ್ಕೆ ಕನ್ನ ಹಾಕಿದ ಸೈಬರ್ ವಂಚಕರು – ನಕಲಿ ಕೋರ್ಟ್ ಆರ್ಡರ್ ತಯಾರಿಸಿ 1.32 ಕೋಟಿ ಲೂಟಿ

ಇದೇ ವಿಚಾರಕ್ಕೆ ಸ್ನೇಹಾಳ ಸಹೋದರ ಟೋನಿ ಮತ್ತು ಆತನ ಸ್ನೇಹಿತರು ಸೇರಿ ಆನಂದ್‍ಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಟ್ರಾಮ್ ಕೇರ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವಿಗೀಡಾಗಿದ್ದಾನೆ.

ಈ ಸಂಬಂಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಟೋನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಕೊಂದು ಡ್ರಮ್‌ಗೆ ತುಂಬಿದ್ದ ಮುಸ್ಕಾನ್‌ ಈಗ ಗರ್ಭಿಣಿ – ಜೈಲಿನಲ್ಲಿ ವಿಶೇಷ ಸೌಲಭ್ಯ