ಬೆಂಗಳೂರು: ಕಾಡಾನೆಯೊಂದು ನಾಡಿಗೆ ಬಂದು ಲೇಔಟ್‍ಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಬಿಲ್ವಾರ ಗ್ರಾಮದಲ್ಲಿ ನಡೆದಿದೆ.
ಬಿಲ್ವಾರ ಗ್ರಾಮ ಬನ್ನೇರುಘಟ್ಟ ಕಾಡುಪ್ರದೇಶಕ್ಕೆ ಹೊಂದಿಕೊಂಡಿರುವ ಕಾರಣ ಆಗಾಗ ಇಲ್ಲಿಗೆ ಆನೆ ಬರುತ್ತದೆ. ಇದರಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿರುವಂತಹ ಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆ ಬಿಲ್ವಾರ ಗ್ರಾಮದ ಲೇಔಟ್ ಒಂದರಲ್ಲಿ ಮುಂಜಾನೆ ಸಮಯದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆ ದಾಂದಲೆ ನಡೆಸಿದೆ.

ಅಷ್ಟೇ ಅಲ್ಲದೆ ಬೀದಿ ನಾಯಿಗಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಕಂಡ ಸ್ಥಳಿಯರು ಮುಂಜಾನೆ ಸಮಯದಲ್ಲಿ ಮನೆಯಿಂದ ಹೊರಬರಲು ಅತಂಕ ಪಡುವಂತಹ ಸ್ಥಿತಿ ನಿರ್ಮಾಣವಾಗಿದ್ದೆದು, ಅಲ್ಲಿನ ಜನರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಲೇಔಟ್ ಸಿಬ್ಬಂದಿ ಪಟಾಕಿ ಸಿಡಿಸಿ ಆನೆಯನ್ನು ಹೊಡಿಸಲು ಹರಸಾಹಸ ಪಟ್ಟಿದ್ದಾರೆ.
https://www.youtube.com/watch?v=K3d7TG9qn4Y





Leave a Reply