- ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು
ದಾವಣಗೆರೆ: ಚನ್ನಗಿರಿಯ (Channagiri) ಗಂಡುಗನಹಂಕಲು ಗ್ರಾಮದಲ್ಲಿ ಕಾಡಾನೆಗಳ (Wild Elephants ) ದಾಳಿಗೆ 20 ಎಕರೆ ಜಮೀನಿನಲ್ಲಿ ಬೆಳೆ ನಾಶವಾಗಿದೆ. ಆನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ತೆಂಗು, ಬಾಳೆ, ಮೆಕ್ಕೆಜೋಳ ನೆಲಸಮವಾಗಿದೆ.
ಗ್ರಾಮದ ಹತ್ತಕ್ಕೂ ಅಧಿಕ ರೈತರಿಗೆ (Farmers) ಸೇರಿದ ಬೆಳೆ ನಾಶವಾಗಿದೆ. ಹತ್ತಾರು ವರ್ಷಗಳಿಂದ ಪ್ರತಿವರ್ಷ ಆನೆ ದಾಳಿಯಿಂದ ಬೆಳೆ ನಾಶವಾಗುತ್ತಿದೆ. ಪ್ರತಿಸಲ ಅಧಿಕಾರಿಗಳಿಗೆ ಮನವಿ ಕೊಟ್ಟರೂ, ಆನೆ ದಾಳಿ ತಡೆಯುತ್ತಿಲ್ಲ ಎಂದು ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹಾಸನ | ನಾಯಿ ಬೊಗಳಿದ್ದಕ್ಕೆ ಕಾರನ್ನೇ ಎತ್ತಿ ಎಸೆದ ಒಂಟಿ ಸಲಗ!
ಸಾವಿರಾರು ರೂಪಾಯಿ ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ವರ್ಷ ಪೂರ್ತಿ ಕಷ್ಟಪಟ್ಟು ದುಡಿದಿದ್ದೇವೆ. ಈಗ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಮಡಕೆ ಮಾಡಲು ವರುಷವೇ ಬೇಕು, ಮಡಕೆ ಒಡೆದು ಹಾಕಲು ದೊಣ್ಣೆಗೆ ನಿಮಿಷ ಸಾಕು. ನಮ್ಮ ಪರಿಸ್ಥಿತಿ ಹಾಗೇ ಆಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆನೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು
