ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

sunil kumar

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ವಿರುದ್ಧ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದರು.

ಮತಾಂತರವನ್ನು ಮಹಾತ್ಮ ಗಾಂಧಿ, ವಿವೇಕಾನಂದರು ಕೂಡಾ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾವೇನು ಎಲೆ, ಅಡಿಕೆ ಕೊಟ್ಟು ಆಹ್ವಾನಿಸಿದ್ವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರ್‍ಯಾರು? – ಸಿದ್ದು ವಿರುದ್ಧ ಹೆಚ್‍ಡಿಕೆ ಕಿಡಿ

ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲಿ, ಉತ್ತರ ನೀಡಲು ನಾವು ಸಿದ್ಧವಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಗೋಮಾತೆಯ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ: ಪ್ರಭು ಬಿ. ಚೌಹಾಣ್

Comments

Leave a Reply

Your email address will not be published. Required fields are marked *