ರಾಮನಗರ: ವೈದ್ಯರ ನಿರ್ಲಕ್ಷ್ಯದಿಂದ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದ ನಿವಾಸಿ ರಂಜಿತಾ (26) ಮೃತ ದುರ್ದೈವಿ. ಮೃತಳ ಕುಟುಂಬಸ್ಥರು ಮತ್ತು ಗ್ರಾಮಸ್ಥರು ರಂಜಿತಾಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಸ್ಪತ್ರೆ ಮುಂಭಾಗ ಮೃತ ಶವವಿಟ್ಟು ಪ್ರತಿಭಟನೆ ಮಾಡಿದ್ದಾರೆ.
ಶುಕ್ರವಾರ ಮೃತ ರಂಜಿತಾ ಸಂತಾನಹರಣ ಶಸ್ತ್ರ ಚಿಕಿತ್ಸೆಗೆಂದು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ರಂಜಿತಾ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆದರೆ ಈ ವೇಳೆ ರಂಜಿತಾ ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ರಂಜಿತಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತಲುಪುವ ಮೊದಲೇ ರಂಜಿತಾ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬದವರು ಆಕ್ರೋಶಗೊಂಡು ವಾಪಸ್ ರಾಮನಗರಕ್ಕೆ ಬಂದು ಜಿಲ್ಲಾಸ್ಪತ್ರೆಯ ಬಾಗಿಲಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply