ಮಧ್ಯರಾತ್ರಿ ಒಂದೇ ರಸ್ತೆಯಲ್ಲಿ 2 ಬಾರಿ ಮಹಿಳೆ ಮೇಲೆ ಗ್ಯಾಂಗ್ ರೇಪ್

ಮುಂಬೈ: ಮಹಿಳೆಯೊಬ್ಬಳು ಒಂದೇ ರಸ್ತೆಯಲ್ಲಿ ಎರಡು ಬಾರಿ ಗ್ಯಾಂಗ್ ರೇಪ್‍ಗೆ ಒಳಗಾದ ಘಟನೆ ಜನವರಿ 16ರ ಮಧ್ಯರಾತ್ರಿ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ವಿಧವೆ ಆಗಿದ್ದು, ಜನವರಿ 15ರಂದು ಕಾರ್ಯಕ್ರಮವೊಂದನ್ನು ಮುಗಿಸಿ ರಾತ್ರಿ 11.30ಕ್ಕೆ ಮನೆಗೆ ಹಿಂತಿರುಗುತ್ತಿದ್ದಳು. ಈ ವೇಳೆ 17, 19 ಹಾಗೂ 21 ವರ್ಷದ ಕಾಮುಕರು ಮಹಿಳೆಯನ್ನು ಯಾರೂ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಒಬ್ಬರ ನಂತರ ಒಬ್ಬರು ಅತ್ಯಾಚಾರ ಮಾಡಿದ್ದಾರೆ. ಬಳಿಕ ಮೂವರು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಮೂವರು ಪರಾರಿ ಆಗುತ್ತಿದ್ದಂತೆ ಸಂತ್ರಸ್ತೆ ಅಲ್ಲಿಂದ ತನ್ನ ಮನೆಗೆ ಹಿಂತಿರುಗುತ್ತಿದ್ದಳು. ಈ ವೇಳೆ ಮೊದಲ ಬಾರಿ ಅತ್ಯಾಚಾರಗೊಳಗಾದ ಸ್ಥಳದಿಂದ ಒಂದು ಕಿ.ಮೀ ಹತ್ತಿರದಲ್ಲೇ ಇಬ್ಬರು ಕಾಮುಕರು ಆಕೆಯನ್ನು ತಡೆದಿದ್ದಾರೆ. 18 ಹಾಗೂ 21 ವರ್ಷದ ಯುವಕರು ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಮಹಿಳೆಯ ತಲೆಗೆ ಗಾಯವಾಗಿದೆ.

ಮಹಿಳೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಮನೆಗೆ ತಲುಪಿ ನಿದ್ದೆಗೆ ಜಾರಿದ್ದಳು. ಮರುದಿನ ಎದ್ದ ಮೇಲೆ ಸಂತ್ರಸ್ತೆ ಆಸ್ಪತ್ರೆಗೆ ಹೋಗಿ ವೈದ್ಯರ ಬಳಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಶುಕ್ರವಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಬಳಿ ತಾವು ಮಹಿಳೆ ಮೇಲೆ ಅತ್ಯಾಚಾರ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಪೊಲೀಸರು ಮೊದಲು ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದರು. ಸೋಮವಾರ ಆರೋಪಿಗಳು ತಾವು ಅತ್ಯಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಅಪ್ರಾಪ್ತ ಬಾಲಕ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *