43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ – ಮಹಿಳೆ ಅರೆಸ್ಟ್

ನವದೆಹಲಿ: ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸೂಟ್‍ಕೇಸ್ ಟ್ರಾಲಿಯಲ್ಲಿ 43.2 ಕೋಟಿ ಮೌಲ್ಯದ ಕೊಕೇನ್(ಡ್ರಗ್ಸ್) ಬೇರೆ ಕಡೆ ಸಾಗಿಸಲು ಪ್ರಯತ್ನಿಸುತ್ತಿದ್ದಳು. ಆದರೆ ಅಧಿಕಾರಿಗಳಿಗೆ ಅನುಮಾನ ಬಂದು ಆಕೆಯ ಸೂಟ್‍ಕೇಸ್ ಪರಿಶೀಲಿಸಿದಾಗ ಬಿಳಿ ಬಣ್ಣದ ಪುಡಿ ಪತ್ತೆಯಾಗಿದೆ. ನಂತರ ಅದನ್ನು ಪರೀಕ್ಷಿಸಿದಾಗ ಅದು ಡ್ರಗ್ಸ್ ಎಂದು ತಿಳಿದುಬಂದಿದೆ. ನಂತರ ಆಕೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

ಘಟನೆ ವಿವರ: ಮಹಿಳೆಯೂ ಮೊದಲು ಲಾವೋಸ್‍ನಿಂದ ದೋಹಾಗೆ ಮತ್ತು ದೋಹಾದಿಂದ ನವದೆಹಲಿಗೆ ವಿಮಾನದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಳು. ಅನುಮಾನದ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಆಕೆಯನ್ನು ತಡೆದಿದ್ದಾರೆ. ಆಕೆಯ ಲಗೇಜ್ ಅನುಮಾನಾಸ್ಪದವಾಗಿ ಕಂಡುಬಂದಿದ್ದು, ಅದನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ಸೂಟ್‍ಕೇಸ್ ನಲ್ಲಿ ನಮಗೆ ಬಿಳಿ ಪುಡಿ ಸಿಕ್ಕಿದೆ. ನಂತರ ಅದನ್ನು ಪರೀಕ್ಷಿಸಿದಾಗ ಅದು ಡ್ರಗ್ಸ್ ಎಂದು ಪತ್ತೆಯಾಗಿದೆ. ಇದು 2,880 ಗ್ರಾಂ. ತೂಕ ಇದ್ದು, 43.2 ಕೋಟಿ ರೂ. ಬೆಲೆಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಎನ್‍ಡಿಪಿಎಸ್(ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್) ಕಾಯ್ದೆಯ ಸೆಕ್ಷನ್ 21, 23 ಮತ್ತು 29 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧವಾಗಿದೆ. ಮಹಿಳೆ ವಿರುದ್ಧ ಕಸ್ಟಮ್ಸ್ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದು, ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 43(ಬಿ) ಅಡಿಯಲ್ಲಿ ಆಕೆಯನ್ನು ಬಂಧಿಸಲಾಗಿದೆ. ಆಕೆಯ ಸೂಟ್‍ಕೇಸ್ ಟ್ರೋಲಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಹಿಳೆಯನ್ನು ಮೊದಲು ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಕೆಗೆ ಕೋವಿಡ್ ನೆಗೆಟಿವ್ ಬಂದಿದೆ. ನಂತರ ಮಹಿಳೆಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು, ಆಕೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅಧಿಕಾರಿಗಳ ವಾದವನ್ನು ಆಲಿಸಿದ ನ್ಯಾಯಾಲಯ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಅನುಮತಿಸಿತು.  ಇದನ್ನೂ ಓದಿ: ‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ

ಪ್ರಸ್ತುತ ಆಕೆಯನ್ನು ನ್ಯಾಯಾಲಯ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮಹಿಳೆ ಬಗ್ಗೆ ಅಧಿಕಾರಿಗಳು ಯಾವುದೇ ರೀತಿಯ ಹೆಸರನ್ನು ಬಿಟ್ಟುಕೊಟ್ಟಿಲ್ಲ. ಆದರೆ ಆಕೆ ವಿಚ್ಛೇದನ ಪಡೆದುಕೊಂಡಿದ್ದಾಳೆ ಎಂದು ಮಾತ್ರ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *