ಒಂಟಿ ಮಹಿಳೆಯನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾದ ಪಾಪಿಗಳು

ಮಂಡ್ಯ: ಒಂಟಿ ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ನಿವಾಸಿ ಒಂಟಿ ಮಹಿಳೆ ಪುಷ್ಪಲತಾ (45) ಮನೆಗೆ ಅಪರಿಚಿತರು ನುಗ್ಗಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಪುಷ್ಪಲತಾ ಅವರ ಪತಿ ಕಳೆದ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಅದಕ್ಕೆ ಒಂಟಿಯಾಗಿಯೇ ಪುಷ್ಪಲತಾ ತನ್ನ ಮಗನನ್ನು ನೋಡಿಕೊಂಡು ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

ನಡೆದಿದ್ದೇನು?
ಪುಷ್ಪಲತಾ ಜೀವನ ಸಾಗಿಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ಬುಧವಾರ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದಾಗ ಪುಷ್ಪಲತಾ ಕೊಲೆ ನಡೆದಿದೆ. ತಾಯಿ ಎಷ್ಟು ಸಮಯವಾದರೂ ಮೆಡಿಕಲ್ ಸ್ಟೋರ್‌ಗೆ ಬಾರದ ಹಿನ್ನೆಲೆ ಪುಷ್ಪಲತಾ ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಂತಕರು ಪುಷ್ಪಲತಾ ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಅಲ್ಲದೇ ಪುಷ್ಪಲತಾ ಮೃತದೇಹ ಅರ್ಧಂಬರ್ಧ ಬಟ್ಟೆಯಲ್ಲಿ ಪತ್ತೆಯಾಗಿರುವುದರಿಂದ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

ಪುಷ್ಪಲತಾ ಅವರ ಕೊಲೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಶೋಧಕಾರ್ಯವನ್ನು ಪ್ರಾರಂಭಿಸಿದ್ದಾರೆ.

Live Tv

Comments

Leave a Reply

Your email address will not be published. Required fields are marked *