ಲಕ್ನೋ: ಕುಟುಂಬಸ್ಥರನ್ನು ಒತ್ತೆಯಾಳಾಗಿರಿಸಿಕೊಂಡು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.
ಈ ಘಟನೆ ಬುಧವಾರ ರಾತ್ರಿ ಗಾಜಿಯಾಬಾದ್ ಕಾಕ್ರಾ ಗ್ರಾಮದಲ್ಲಿ ನಡೆದಿದೆ. ಐದು ಮಂದಿ ದುಷ್ಕರ್ಮಿಗಳ ತಂಡವೊಂದು ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಮನೆಗೆ ನುಗ್ಗಿದ್ದಾರೆ. ಬಳಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಕುಟುಂಬಸ್ಥರನ್ನು ಬೆದರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೇ ದುಷ್ಕರ್ಮಿಗಳು ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಎಸಗಿದ ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಗಾಜಿಯಾಬಾದ್ ಡಿಎಸ್‍ಪಿ ಪ್ರಭಾತ್ ಕುಮಾರ್ ಹೇಳಿದ್ದಾರೆ.
ಸದ್ಯ ಈ ಪ್ರಕರಣ ಕುರಿತು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply