ನ್ಯಾಯ ಸಿಗಲಿಲ್ಲವೆಂದು ಪೊಲೀಸ್ ಠಾಣೆ ಮುಂದೆಯೇ ಬೆಂಕಿ ಹಚ್ಚಿಕೊಂಡಳು!

ಲಕ್ನೋ: ನ್ಯಾಯ ಸಿಗಲಿಲ್ಲವೆಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡಿರುವ ಘಟನೆ ನೊಯ್ಡಾದಲ್ಲಿ ನಡೆದಿದೆ.

ತನಗೆ ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ನಿನ್ನೆ ನೊಯ್ಡಾ 2ನೇ ಹಂತದ ಪೊಲೀಸ್ ಠಾಣೆಯ ಹೊರಗೆ ಬೆಂಕಿ ಹಚ್ಚಿಕೊಂಡಿದ್ದಾರೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆ ದೇಹ 40% ಸುಟ್ಟುಹೋಗಿದೆ. ಈ ಹಿನ್ನೆಲೆ ಆಕೆಯನ್ನು ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಇದನ್ನೂ ಓದಿ:  ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹ – ನವದಂಪತಿ ಆತ್ಮಹತ್ಯೆ

ನೊಯ್ಡಾದ ಇಲಾಬಸ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಸಂತ್ರಸ್ತೆಯ ದೂರನ್ನು ತೆಗೆದುಕೊಳ್ಳಲು ನಿರಕಾರಿಸಿದ್ದರು. ಪರಿಣಾಮ ಮಹಿಳೆ ಈ ರೀತಿ ಕೃತ್ಯಕ್ಕೆ ಕೈಹಾಕಿದ್ದಾಳೆ. ಘಟನೆ ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ತನ್ನ ಆಳಲನ್ನು ಹೇಳಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಏನಿದು ಘಟನೆ?
ಗೌತಮ್ ಬುಧ್ ನಗರದ ಜಂಟಿ ಪೊಲೀಸ್ ಕಮಿಷನರ್ ಲವ್ ಕುಮಾರ್ ಈ ಕುರಿತು ಮಾತನಾಡಿದ್ದು, ಮಹಿಳೆಯು ಇಲಬಾಸ್ ಗ್ರಾಮದ ನೀರಜ್ ಮತ್ತು ಸುಮಿತ್ ಹೆಸರಿನ ಇಬ್ಬರು ಪುರುಷರ ವಿರುದ್ಧ ಎನ್‍ಎಸ್‍ಇಜೆಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಆದರೆ ಅವರು ದೂರು ತೆಗೆದುಕೊಳ್ಳಲು ನಿರಾಕರಿಸಿದ್ದು, ತನ್ನ ವ್ಯಕ್ತಿತ್ವಕ್ಕೆ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಸಂಗೀತ ರೋಚಿಗೆದ್ದಿದ್ದಾಳೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 1,200 ವರ್ಷದಷ್ಟು ಹಳೆಯ ಮಕ್ಕಳ, ವಯಸ್ಕರ ಅವಶೇಷ ಪತ್ತೆ!

ಈ ವೇಳೆ ಆಕೆಯ ವಿರುದ್ಧವೂ ಪೊಲೀಸರಿಗೆ ದೂರು ಬಂದಿದೆ. ಈ ದೂರಿನಲ್ಲಿ ಸಂಗೀತ ಸಾಕಷ್ಟು ಜನರಿಂದ ಸಾಲ ಪಡೆದಿದ್ದಾರೆ. ಆದರೆ ತೆಗೆದುಕೊಂಡಿದ್ದ ಹಣವನ್ನು ಹಿಂತಿರುಗಿಸುತ್ತಿಲ್ಲ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಸಂಬಂಧ ಭಾನುವಾರ ಎರಡೂ ಕಡೆಯವರನ್ನು ಠಾಣೆಗೆ ಕರೆಸಲಾಗಿತ್ತು. ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ತಿಳಿಸಲಾಗಿತ್ತು. ಆದರೆ ಆಕೆ ಮಂಗಳವಾರ ಪೊಲೀಸ್ ಠಾಣೆಗೆ ಬಂದು ಆತ್ಮಾಹುತಿಗೆ ಯತ್ನಿಸಿದ್ದಾಳೆ ಎಂದು ತಿಳಿಸಿದ್ದಾರೆ. ನೊಯ್ಡಾ ಹಂತ 1ರ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ.

Comments

Leave a Reply

Your email address will not be published. Required fields are marked *