ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಕೊಟ್ಟ ಶಾಸಕನಿಗೆ ಮಹಿಳೆಯಿಂದ ಕಪಾಳಮೋಕ್ಷ

ಚಂಡೀಗಢ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಜನನಾಯಕ್ ಜನತಾ ಪಕ್ಷದ ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿರುವ ಘಟನೆ ಹರಿಯಾಣದಲ್ಲಿ (Haryana) ನಡೆದಿದೆ.

ಮಳೆಯಿಂದ (Rain) ಪ್ರವಾಹ ಉಂಟಾಗಿದ್ದ ಕೈತಾಲ್‍ನ ಗುಹ್ಲಾ ಪ್ರದೇಶಕ್ಕೆ ಶಾಸಕರು ತೆರಳಿದ್ದರು. ಈ ವೇಳೆ ಕಳಪೆ ಒಳಚರಂಡಿ ವ್ಯವಸ್ಥೆಯಿಂದಾಗಿ ಈ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಶಾಸಕರ ಭೇಟಿ ತಡವಾಗಿದೆ ಎಂದು ಮಹಿಳೆ ಆರೋಪಿಸಿದ್ದಾಳೆ. ಅಲ್ಲದೇ ಭದ್ರತಾ ಸಿಬ್ಬಂದಿಯನ್ನು ಹಾಗೂ ಶಾಸಕರನ್ನು (MLA) ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೊದಲ್ಲಿ ಮಹಿಳೆ ಮತ್ತು ಸ್ಥಳೀಯರು ನೀವು ಈಗ ಏಕೆ ಬಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ಬಾರಿಯೂ ದುಬಾರಿ ವಿದ್ಯುತ್‌ ಬಿಲ್‌ – ಹೆಸ್ಕಾಂ ಕಳ್ಳಾಟ ಬಿಚ್ಚಿಟ್ಟ ಪಬ್ಲಿಕ್‌ ಟಿವಿ

ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಮಹಿಳೆಯನ್ನು ಕ್ಷಮಿಸಿದ್ದೇನೆ. ಮಹಿಳೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಹರಿಯಾಣದಲ್ಲಿ ನಿರಂತರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಖಟ್ಟರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ನಾಲ್ಕು ದಿನಗಳಿಂದ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‍ನಲ್ಲಿ ನಿರಂತರ ಮಳೆಯ ಪರಿಣಾಮ ಹರಿಯಾಣದಲ್ಲಿನ ಪ್ರವಾಹಕ್ಕೆ ಕಾರಣವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]