ಚಿಕನ್‌ ಬೇಕು ಎಂದ ಮಕ್ಕಳನ್ನು ಲಟ್ಟಣಿಗೆಯಲ್ಲಿ ಬಡಿದ ತಾಯಿ – ಮಗ ಸಾವು, ಮಗಳಿಗೆ ಗಾಯ

ಮುಂಬೈ: ಚಿಕನ್‌ (Chicken) ಬೇಕು ಎಂದು ಒತ್ತಾಯಿಸಿದ ಮಗನನ್ನು ತಾಯಿಯೇ ಲಟ್ಟಣಿಗೆಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ.

ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕ ತನ್ನ ತಾಯಿ ಪಲ್ಲವಿ (40) ಧುಮ್ಡೆ ಬಳಿ ಚಿಕನ್‌ ಬೇಕು ಎಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಹೊಡೆದು ಹತ್ಯೆಗೈದಿದ್ದಾಳೆ. ಅಲ್ಲದೇ ತನ್ನ 10 ವರ್ಷದ ಮಗಳ ಮೇಲೂ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

ಕಿರುಚಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ. ನಂತರ ಪಾಲ್ಘರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿದ್ದಾರೆ.

ಮಹಿಳೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 103(1) (ಕೊಲೆ) ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ದೇಶ್ಮುಖ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್