ಕೋಲಾರ: ತಾಲ್ಲೂಕಿನ ಮುದುವಾಡಿ ಬಳಿಯ ತೊಂಡಾಲ ಗ್ರಾಮದ ಕೆರೆಯಲ್ಲಿ ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ (Women) ಶವ ಪತ್ತೆಯಾಗಿದೆ.
ಸುಟ್ಟುಹೋದ ಸ್ಥಿತಿಯಲ್ಲಿದ್ದ ದೇಹದಲ್ಲಿ ಮಾಂಗಲ್ಯ ಸರ ಪತ್ತೆಯಾಗಿದ್ದು, ಮೃತದೇಹ ಮಹಿಳೆಯದ್ದೇ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

ಮೃತದೇಹ ಶ್ರೀನಿವಾಸಪುರದ ಮಹಿಳೆ ಶೋಭಾ (37) ಅವರದ್ದು, ಎಂದು ಗುರುತಿಸಲಾಗಿದೆ. ಕಿಡಿಗೇಡಿಗಳು ಮಹಿಳೆಯನ್ನ ಕೊಲೆ ಮಾಡಿ, ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸೀರೆಯೇ ಚಂದ ಎಂದಿದ್ದ ವಿದ್ಯಾ ಬಾಲನ್ ಕೈಯಲ್ಲಿ ನ್ಯೂಸ್ ಪೇಪರ್

ಕೋಲಾರ ಗ್ರಾಮಾಂತರ ಪೊಲೀಸರು (Kolar Rural Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಹಿಳೆಯ ಗುರುತು ಪತ್ತೆಯಾಗಿದೆ. ಇಲ್ಲಿನ ನಿವಾಸಿ ವೆಂಕಟರಮಣ ಈಕೆಯನ್ನ 2ನೇ ಮದುವೆಯಾಗಿದ್ದ. ಮಹಿಳೆ ಶೋಭಾ ಶ್ರೀನಿವಾಸಪುರದಲ್ಲೇ ಬ್ಯೂಟಿಪಾರ್ಲರ್ (Beauty Parlour) ನಡೆಸುತ್ತಿದ್ದರು ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Leave a Reply