ಸಿದ್ರಾಮಯ್ಯ ಸಾಲ ಮನ್ನಾ ಅಂದಿದ್ರು, ನಾವ್ ದುಡ್ಡು ಕಟ್ಟಲ್ಲ – ಬ್ಯಾಂಕ್ ಸಿಬ್ಬಂದಿಗೆ ಸ್ತ್ರಿಶಕ್ತಿ ಸಂಘದ ಮಹಿಳೆಯರಿಂದ ಕ್ಲಾಸ್

ಕೋಲಾರ: ಡಿಸಿಸಿ ಬ್ಯಾಂಕ್‍ನಿಂದ (DCC Bank) ಕೊಟ್ಟದ್ದ ಸಾಲ (Loan) ಮರುಪಾವತಿಸುವಂತೆ ತಿಳಿಸಲು ಹೋದ ಅಧಿಕಾರಿಗಳಿಗೆ ಮಹಿಳೆಯರು ತರಾಟೆ ತೆಗೆದುಕೊಳ್ಳುತ್ತಿರುವ ಘಟನೆ ಕೋಲಾರದಿಂದ (Kolar) ವರದಿಯಾಗಿದೆ.

 

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ (Congress Guarantee) ಜೊತೆಗೆ ಮಹಿಳೆಯರಿಗೆ ಸಿದ್ದರಾಮಯ್ಯ (Siddaramaiah) ನೀಡಿದ್ದ ಮತ್ತೊಂದು ಭರವಸೆ ಈ ಮೂಲಕ ಈಗ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿದ್ದರು. ಇದೇ ಕಾರಣಕ್ಕೆ ಈಗ ಕೋಲಾರ ಡಿಸಿಸಿ ಬ್ಯಾಂಕ್ ಸಿಬ್ಬಂದಿಗೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಂದ ಸಾಲ ವಸೂಲಿ ಮಾಡುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಸಿಹಿ ಸುದ್ದಿ – ಕೇರಳಕ್ಕೆ ಮುಂಗಾರು ಪ್ರವೇಶ

ಚುನಾವಣೆ ವೇಳೆ ಐದು ಲಕ್ಷದವರೆಗಿನ ಬಡ್ಡಿ ರಹಿತವಾಗಿ ನೀಡಿದ ಸಾಲವನ್ನು ಮನ್ನಾ ಮಾಡುವುದಾಗಿ ಕೋಲಾರದಲ್ಲಿ ಸಿದ್ದರಾಮಯ್ಯ ಮೊದಲು ಘೋಷಣೆ ಮಾಡಿದ್ದರು. ಅಲ್ಲದೆ ಈಗಿರುವ ಸಾಲದ ಮೊತ್ತವನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ 1 ಲಕ್ಷ ರೂ. ನಷ್ಟು ಹೆಚ್ಚಿಗೆ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ. ಇದನ್ನೇ ಕಾರಣ ನೀಡಿ ಮಹಿಳೆಯರು ಸಾಲ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಹೊಸ ಷರತ್ತು – ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2 ಸಾವಿರ ಸಿಗಲ್ಲ