ಅಕ್ಟೋಬರ್ ಮೊದಲ ವಾರದಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ WHO ಮಾನ್ಯತೆ?

ನವದೆಹಲಿ: ಅಕ್ಟೋಬರ್ ಮೊದಲ ವಾರದಲ್ಲಿ ಭಾರತೀಯ ದೇಸಿ ಲಸಿಕೆ ಕೊವ್ಯಾಕ್ಸಿನ್‍ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಸಿಗುವ ಸಾಧ್ಯತೆಗಳಿವೆ. ಅಕ್ಟೋಬರ್ 5ರಂದು WHO ಸಮಿತಿಯ ತಜ್ಞರ ಸಭೆ ನಡೆಯಲಿದ್ದು, ಈ ಸಭೆಯ ಬಳಿಕ ಮಾನ್ಯತೆ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಈಗಾಗಲೇ ಭಾರತದಲ್ಲಿ ಬಳಕೆ ಮಾಡಲಾಗುತ್ತಿದೆ. ಇದಕ್ಕೆ ಜಾಗತಿಕ ಮಾನ್ಯತೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆಯ ಅವಶ್ಯಕತೆ ಇದ್ದು, ಇದಕ್ಕಾಗಿ ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

ಭಾರತ್ ಬಯೋಟೆಕ್ ಮನವಿ ಸ್ವೀಕರಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿತ್ತು. ಹೆಚ್ಚುವರಿ ದಾಖಲೆಗಳನ್ನು ಈಗಾಗಲೇ ಭಾರತ್ ಬಯೋಟೆಕ್ ಸಲ್ಲಿಸಿದ್ದು, ಈ ವರದಿಗಳನ್ನು ತಜ್ಞರು ಪರಿಶೀಲನೆ ನಡೆಸಲಿದ್ದಾರೆ.

ತಜ್ಞರ ಸಮಿತಿ ಕೊವ್ಯಾಕ್ಸಿನ್ ಲಸಿಕೆಯ ಪರಿಣಾಮಕಾರಿತ್ವ, ಅಡ್ಡ ಪರಿಣಾಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿ, ಬಳಿಕ ಮಾನ್ಯತೆ ನೀಡುವ ಸಾಧ್ಯತೆಗಳಿದೆ. ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ಭಾರತದ ದೇಶಿಯ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಸದ್ಯಕ್ಕಿಲ್ಲ ಮೂರನೇ ಅಲೆಯ ಆತಂಕ – ತಜ್ಞರ ಅಭಿಪ್ರಾಯ ಏನು ಗೊತ್ತಾ?

Comments

Leave a Reply

Your email address will not be published. Required fields are marked *