ಯಾದಗಿರಿ: ರಾಜ್ಯದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿನ ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುದರಿಂದ ಬಸವಸಾಗರ ಜಲಾಶಯವು ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರನ್ನು ಹರಿಸಲಾಗಿದೆ.
ಬಸವಸಾಗರ ಜಲಾಶಯದಲ್ಲಿ ಒಳ ಹರಿರುವ ಪ್ರಮಾಣ ಹೆಚ್ಚಾದಂತೆ ಹೊರ ಹರಿವಿನ ಪ್ರಮಾಣವು ಕೂಡ ಹೆಚ್ಚಾಗುತ್ತಿದೆ. 33.33 ಟಿಎಂಸಿಯಲ್ಲಿ ಸಂಗ್ರಹ ಸಾಮರ್ಥ್ಯವಿರುವ ಬಸವಸಾಗರ ಜಲಾಶಯದಲ್ಲಿ ಈಗಾಗಲೇ 33.267 ಟಿಎಂಸಿ ನೀರು ಸಂಗ್ರಹವಾಗಿದೆ.
ಆಲಮಟ್ಟಿ ಜಲಾಶಯದಿಂದ ಬಸವಸಾಗರಕ್ಕೆ 51 ಸಾವಿರ ಕ್ಯೂಸೆಕ್ ನೀರು ಒಳಹರಿವು ಬರುತ್ತಿದ್ದು, ಜಲಾಶಯದಿಂದ 52 ಸಾವಿರ ಕ್ಯೂಸೆಕ್ ನೀರನ್ನು ಆರು ಗೇಟ್ ಮೂಲಕ ಕೃಷ್ಣಾ ನದಿಗೆ ನೀರು ಬಿಡಲಾಗಿದೆ.
ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಜಲಾಶಯದಿಂದ ಮತ್ತಷ್ಟು ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತದೆ. ಹೀಗಾಗಿ ನದಿ ಪಾತ್ರಕ್ಕೆ ಜನರು ತೆರಳದಂತೆ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳ ಸೂಚನೆ ನೀಡಿದ್ದಾರೆ.
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
https://www.youtube.com/watch?v=1W5eHD6tGKo




Leave a Reply