ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್

ಆನೇಕಲ್: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವು ತರಿಸಿದೆ ನಾವೆಲ್ಲರೂ ಒಂದೇ ಎನ್ನುವ ಭಾವನೆಯಿಂದ ಬದುಕಬೇಕು ಎಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವೆಲ್ಲರೂ ಒಂದೇ ಎನ್ನುವ ಭಾವನೆ ನಮ್ಮಲ್ಲಿ ಮೂಡಬೇಕು. ಜಾತಿಗಳ ಒಳಗೆ ಸಂಘರ್ಷಗಳು ನಡೆಯಬಾರದು. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಘಟನೆಗಳು ಇನ್ನೂ ಮುಂದೆ ನಡೆಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ. ಯಾವುದೇ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

ಆನೇಕಲ್ ಹಾಗೂ ಮೈಸೂರಿಗೆ ಈ ಹಿಂದೆ ಸಂಬಂಧ ಇತ್ತು ಎನ್ನುವ ಮಾಹಿತಿ ತಿಳಿದು ಬಂದಿದೆ. ಇದರಿಂದಾಗಿ ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯ ಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವವನ್ನು ಹಮ್ಮಿಕೊಂಡು ಆಹ್ವಾನ ನೀಡಿದ್ದಾರೆ. ನಾನು ತುಂಬಾ ಸಂತೋಷದಿಂದ ಇಲ್ಲಿಗೆ ಆಗಮಿಸಿ ಪೂಜೆಯಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷ ತಂದಿದೆ ಎಂದರು. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

Comments

Leave a Reply

Your email address will not be published. Required fields are marked *