ಸಂಘ-ಸಂಸ್ಥೆಗಳ ಜೊತೆ ಅರಮನೆ ನಂಟು ಮುಂದುವರಿಯಲಿದೆ- ಯದುವೀರ್

ಶಿವಮೊಗ್ಗ: ಮೈಸೂರು ಸಂಸ್ಥಾನದಿಂದ ಆರಂಭಗೊಂಡ ಸಂಘ-ಸಂಸ್ಥೆಗಳ ಜೊತೆ ಅರಮನೆ ನಂಟು ಮುಂದುವರಿಯಲಿದೆ ಎಂದು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಕ್ಕೆ 55 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಸಂಸ್ಥಾಪಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ, ಜೆ.ಆರ್.ವಾಸುದೇವ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಯದುವೀರ್, ಮೈಸೂರು ಸಂಸ್ಥಾನ ತನ್ನ ಕರ್ತವ್ಯವನ್ನು ಎಂದಿಗೂ ಮೆರೆಯಲ್ಲ. ರಾಜ್ಯದಲ್ಲಿ ಕೈಗಾರಿಕಾ ಸಂಘದ ಬೆಳವಣಿಗೆಯಲ್ಲಿ ಸಂಸ್ಥಾನ ಮಹತ್ವದ ಪಾತ್ರ ವಹಿಸಿದೆ. ಜನರು ಅರಮನೆಯಿಂದ ಅಂತರ ಕಾಯ್ದುಕೊಳ್ಳುವ ಅಗತ್ಯವಿಲ್ಲ. ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆಗಳು ಇಂದಿಗೂ ಯಶಸ್ವಿಯಾಗಿ ನಡೆಯುತ್ತಿರುವ ಶ್ರೇಯಸ್ಸು ಸಿಬ್ಬಂದಿ ವರ್ಗಕ್ಕೆ ಸಲ್ಲುತ್ತದೆ. ಹಾಗೆಯೇ ಮುಂದಿನ ವರ್ಷ ಜಯಚಾಮರಾಜೇಂದ್ರ ಒಡೆಯರ್ ಅವರ ಶತಮಾನೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಚಿಸಿದ್ದೇವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *