ಬೆಂಗಳೂರು ಅರಮನೆಯಲ್ಲಿಂದು ಯದುವಂಶದ ಕುಡಿಗೆ ನಾಮಕರಣ

ಬೆಂಗಳೂರು: ಇಂದು ಬೆಂಗಳೂರು ಅರಮನೆಯಲ್ಲಿ ಯದುವಂಶದ ಕುಡಿಗೆ ನಾಮಕರಣ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನ ಅರಮನೆಯಲ್ಲಿ ನಡೆಯುವ ಸರಳ ಸಮಾರಂಭಕ್ಕೆ ಬಂಧುಗಳು ಮತ್ತು ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಈಗಾಗಲೇ ರಾಜಮಾತೆ ಪ್ರಮೋದಾದೇವಿ ಬೆಂಗಳೂರಿನ ಅರಮನೆಗೆ ಆಗಮಿಸಿದ್ದಾರೆ. ಆದರೆ ಮೈಸೂರಿನ ಅರಮನೆಯಲ್ಲಿ ಯಾಕೆ ಯದುವಂಶದ ಕುಡಿಯ ನಾಮಕರಣ ಕಾರ್ಯಕ್ರಮ ನಡೆಯುತ್ತಿಲ್ಲ ಎಂಬ ಅಂಶ ಚರ್ಚೆಗೆ ಗ್ರಾಸವಾಗಿದೆ.

ಕಳೆದ ಡಿಸೆಂಬರ್‍ನಲ್ಲಿ ಮಹಾರಾಜ ಯದುವೀರ್ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದನ್ನೂ ಓದಿ: ದಕ್ಷಿಣ ಕನ್ನಡದ ಈ ಹನುಮನ ಕೃಪೆಯಿಂದ ಯದುವೀರ್ -ತ್ರಿಷಿಕಾಗೆ ಪುತ್ರ ಸಂತಾನ!

ಮೈಸೂರು ಯದುವಂಶಕ್ಕೆ 1953ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನನವಾದ ನಂತರ ಇಲ್ಲಿಯವರೆಗೆ ಯಾವುದೇ ಗಂಡು ಮಕ್ಕಳು ಜನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಯದುವೀರ್ ಅವರನ್ನು 2013ರಲ್ಲಿ ಸಂಬಂಧಿಕರಲ್ಲೇ ದತ್ತು ತೆಗೆದುಕೊಳ್ಳಲಾಗಿತ್ತು. 2016 ಜೂನ್ 27ರಂದು ತ್ರಿಷಿಕಾ ಕುಮಾರಿ ಜೊತೆ ಮದುವೆ ಮಾಡಿಕೊಡಲಾಗಿತ್ತು.

ಇದನ್ನೂ ಓದಿ: ಮೈಸೂರು ರಾಜರಿಗೆ ಪುತ್ರ ಸಂತಾನ: ಅಲಮೇಲಮ್ಮ ಶಾಪ ವಿಮೋಚನೆ ಆಯ್ತಾ? ಶಾಪ ನೀಡಿದ್ದು ಯಾಕೆ?

Comments

Leave a Reply

Your email address will not be published. Required fields are marked *