ಆತ್ಮಹತ್ಯೆಗೆ ಯತ್ನಿಸಿದ್ದ ಯಶ್ ಅಭಿಮಾನಿ ಸಾವು..!

ಬೆಂಗಳೂರು: ಹುಟ್ಟುಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ಬಿಡದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಅಭಿಮಾನಿ ಇಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ.

ರವಿ ಮೃತಪಟ್ಟ ಯಶ್ ಅಭಿಮಾನಿ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಯಶ್ ಭೇಟಿಗೆ ಅವಕಾಶ ಸಿಗದ್ದಕ್ಕೆ ಮನೆ ಮುಂದೆ ಅಭಿಮಾನಿಯಿಂದ ಆತ್ಮಹತ್ಯೆಗೆ ಯತ್ನ

ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದನು. ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ರವಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣವೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ: ಇದೇ ಕೊನೆ, ನನ್ನ ಅಭಿಮಾನಿಗಳು ಯಾರೇ ಹೀಗೆ ಮಾಡ್ಕೊಂಡ್ರೆ ನಾನು ಮತ್ತೆ ಬರಲ್ಲ: ಕೈ ಮುಗಿದು ಯಶ್ ಮನವಿ

ಈ ಬಗ್ಗೆ ಮಾಹಿತಿ ತಿಳೀಯುತ್ತಿದ್ದಂತೆಯೇ ಯಶ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ, ರವಿ ಆರೋಗ್ಯ ವಿಚಾರಿಸಿದ್ದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಯಶ್, ಇದೇ ಕೊನೆ. ಇನ್ನು ಮುಂದೆ ನನ್ನ ಅಭಿಮಾನಿಗಳು ಈ ರೀತಿಯ ದುಸ್ಸಾಹಸಕ್ಕೆ ಪ್ರಯತ್ನ ಪಟ್ಟರೆ ನಾನು ಮತ್ತೆ ಬರುವುದಿಲ್ಲ ಎಂದು ಕೈ ಮುಗಿದು ಮನವಿ ಮಾಡಿಕೊಂಡಿದ್ದರು.

ಈ ಘಟನೆ ನಡೆದಾಗ ನಾನು ಮನೆಯಲ್ಲಿ ಇರಲಿಲ್ಲ. ಅಂಬರೀಶ್ ಅಣ್ಣ ನಮ್ಮ ಮಧ್ಯೆ ಇಲ್ಲ ಎನ್ನುವ ಕಾರಣಕ್ಕೆ ಹುಟ್ಟುಹಬ್ಬ ಆಚರಿಸುವುದಿಲ್ಲ ಎಂದು ಮೊದಲೇ ತಿಳಿಸಿದ್ದೆನು. ಪ್ರತಿ ವರ್ಷ ನಾನು ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದೆ. ನನಗೆ ಈಗ ಸ್ವಲ್ಪ ಹೊತ್ತಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ವಿಷಯ ಗೊತ್ತಾಯಿತು. ವಿಚಾರ ಗೊತ್ತಾದ ತಕ್ಷಣವೇ ಆಸ್ಪತ್ರೆಗೆ ಬಂದೆ ಎಂದು ಹೇಳಿದ್ದರು.

https://www.youtube.com/watch?v=_RZyZvDggRU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *