ಬಳ್ಳಾರಿ: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ರಜಾ ಕೋರಿ ಅಭಿಮಾನಿಯೊಬ್ಬರು ಪತ್ರ ಬರೆದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಅಭಿಮಾನಿ ಕೆ.ಶಿವಕುಮಾರ್ ಅವರು ಪ್ರಾಂಶುಪಾಲರಿಗೆ ರಜಾ ಕೋರಿ ಪತ್ರ ಬರೆದ ವಿದ್ಯಾರ್ಥಿ. ಇವರು ಬಳ್ಳಾರಿಯ ಸರಳದೇವಿ ಕಾಲೇಜಿನಲ್ಲಿ ಬಿಕಾಂ ಮೂರನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜ.8 ರಂದು ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಾಂಶುಪಾಲರಿಗೆ ರಜೆ ಕೋರಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಒಂದು ದಿನ ರಜಾ ನೀಡಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಿವಕುಮಾರ್, ರಾಕಿಂಗ್ ಸ್ಟಾರ್ ಯಶ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಯಶ್ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದಾರೆ.

ಪತ್ರದಲ್ಲಿ ಏನಿದೆ?: ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬಕ್ಕೆ ಇನ್ನೂ 2 ದಿನ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಅಭಿಮಾನಿಗಳು 24 ಗಂಟೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ನಲ್ಲಿ ಭಾಗವಹಿಸುತ್ತಿದ್ದಾರೆ. ನಾನು ಅದರಲ್ಲೂ ಭಾಗವಹಿಸುತ್ತೇನೆ. ಹೀಗಾಗಿ ನನಗೆ ಹಾಗೂ ಇತರ ಯಶ್ ಅಭಿಮಾನಿಗಳಿಗೂ ರಜೆ ಕೊಡಿ ಎಂದು ವಿನಂತಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳ ಶುಭಾಶಯಗಳನ್ನು ನೀವು ನೋಡಿ, ಬಾಸ್‌ಗೆ ವಿಶ್ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

Leave a Reply