ದಾರಿ ಮಧ್ಯೆ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಬಿಎಸ್‍ವೈ

ಬೆಂಗಳೂರು: ರಾಜಭವನಕ್ಕೆ ತೆರಳುವ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ದಾರಿ ಮಧ್ಯೆ ಪೇಜಾವರ ಶ್ರೀಗಳು ಸಿಕ್ಕಿದ್ದು, ಅವರ ಆಶೀರ್ವಾದ ಪಡೆದಿದ್ದಾರೆ.

ಹೌದು, ಇಂದು ಮುಖ್ಯಮಂತ್ರಿಯಾಗಿ ಬಿ. ಎಸ್ ಯಡಿಯೂರಪ್ಪ ಅವರು ಪ್ರಮಾಣವಚ ಸ್ವೀಕರಿಸುವ ಸಲುವಾಗಿ ರಾಜಭವನಕ್ಕೆ ತೆರಳಿ ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. ಈ ವೇಳೆ ದಾರಿ ಮಧ್ಯೆ ಪೇಜಾವರ ಶ್ರೀಗಳು ಬಿಎಸ್‍ವೈ ಅವರಿಗೆ ಸಿಕ್ಕಿದ್ದಾರೆ. ಶ್ರೀಗಳನ್ನು ಕಂಡ ಕೂಡಲೇ ಬಿಎಸ್‍ವೈ, ತಮ್ಮ ಕಾರಿನಿಂದ ಇಳಿದು ನೇರವಾಗಿ ಶ್ರೀಗಳ ಬಳಿ ಹೋಗಿ ಅವರ ಆಶೀರ್ವಾದ ತೆಗೆದುಕೊಂಡಿದ್ದಾರೆ.

ಬಹುಮತ ಸಿಕ್ಕಿದ್ದರೂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯ ಬಿಜೆಪಿ ಯಾಕೆ ತಡಮಾಡುತ್ತಿದೆ ಎಂಬ ಕುತೂಹಲ ರಾಜ್ಯದ ಜನರಲ್ಲಿ ಮೂಡಿತ್ತು. ಈ ಮಧ್ಯೆ ಇಂದು ಬೆಳಗ್ಗೆ 9.15ರ ಸುಮಾರಿಗೆ ಹೈಕಮಾಂಡ್ ಬಿಎಸ್‍ವೈ ಅವರಿಗೆ ದೂರವಾಣಿ ಕರೆ ಮಾಡಿ ಗ್ರೀನ್ ಸಿಗ್ನಲ್ ನೀಡಿದೆ. ಈಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಹಕ್ಕನ್ನು ಮಂಡಿಸಿ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರು ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಲ್ಲಿ ಇಂದೇ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಇಂದು ಸಂಜೆ 6 ರಿಂದ 6.15ರ ಸುಮಾರಿಗೆ ಬಿಎಸ್ ವೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ  ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *