ಲಕ್ನೋ: ಎರಡನೇ ಬಾರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಯೋಗಿ ಆದಿತ್ಯನಾಥ್ ನೇತೃತ್ವದ ಸಂಪುಟಕ್ಕೆ ಈಗ ಸಂಕಷ್ಟ ಎದುರಾಗಿದೆ. ಯೋಗಿ ಸರ್ಕಾರದ ಸಚಿವ ಸಂಪುಟದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಮತ್ತೊಬ್ಬರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ʼದಲಿತ ಅಂತಾ ನನ್ನನ್ನು ಕಡೆಗಣಿಸಿದ್ದಾರೆʼ ಎಂದು ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಸಚಿವ ದಿನೇಶ್ ಕಾರ್ತಿಕ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: Sena vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್

ಕಳೆದ 100 ದಿನಗಳಲ್ಲಿ ನನಗೆ ಯಾವುದೇ ಕೆಲಸ, ಜವಾಬ್ದಾರಿ ವಹಿಸಿಲ್ಲ. ನನಗೆ ತುಂಬಾ ನೋವಾಗಿದೆ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಯುಪಿ ಜಲ ಸಂಪನ್ಮೂಲ ಸಚಿವ ಕಾರ್ತಿಕ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ಕಾರ್ತಿಕ್ ಅವರು ತಮ್ಮ ಪತ್ರದಲ್ಲಿ 100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ ಎಂದು ಹೇಳಿದ್ದಾರೆ. ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪತ್ರದಲ್ಲಿ ನೋಯುತ್ತಿರುವ ಕಾರಣ ರಾಜೀನಾಮೆ ನೀಡುತ್ತಿದ್ದೇನೆ.
ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ. ಸಚಿವನಾಗಿ ನನಗೆ ಯಾವುದೇ ಅಧಿಕಾರವಿಲ್ಲ. ನಾನು ರಾಜ್ಯದ ಸಚಿವನಾಗಿ ಕೆಲಸ ಮಾಡುವುದು ದಲಿತ ಸಮುದಾಯಕ್ಕೆ ವ್ಯರ್ಥ. ನನ್ನನ್ನು ಯಾವುದೇ ಸಭೆಗೆ ಕರೆದಿಲ್ಲ. ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್‌ಗೆ 12 ಲಕ್ಷ, ಇನ್ನೊಂದಕ್ಕೆ 2 ಕೋಟಿ: ಜುಬೇರ್ ವಿರುದ್ಧ ಯುಪಿ ಸರ್ಕಾರ ಸ್ಫೋಟಕ ಆರೋಪ
ಲೋಕೋಪಯೋಗಿ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಕೋಪಗೊಂಡಿದ್ದಾರೆ. ಪ್ರಸಾದ ಅವರು ಕಳೆದ ವರ್ಷ ಯುಪಿ ಚುನಾವಣೆಗೆ ತಿಂಗಳುಗಳ ಮೊದಲು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು.
ಅಕ್ರಮಗಳ ಆರೋಪ ಹೊತ್ತಿದ್ದ ಐವರು ಹಿರಿಯ ಪಿಡಬ್ಲ್ಯೂಡಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸರ್ಕಾರ ಆದೇಶ ಹೊರಡಿಸಿತ್ತು.

Leave a Reply