ಯೋಗಿ ಪ್ರಮಾಣವಚನಕ್ಕೂ ಮುನ್ನವೇ ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ- ರೇಸ್‍ನಲ್ಲಿ ಯಾರಿದ್ದಾರೆ ನೋಡಿ

yogi adithyanath

ಲಕ್ನೋ: ಈ ಬಾರಿಯ ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿ ಗೋವಾ, ಮಣಿಪುರ್, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಪ್ರತಿಷ್ಠಿತ ಹಾಗೂ ಸವಾಲಿನ ಕ್ಷೇತ್ರವಾಗಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಕಳೆದ ಬಾರಿಯಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದರೂ 269 ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಉತ್ತರ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಇದೀಗ ಎಲ್ಲವೂ ಅಂದುಕೊಂಡಂತೆ ಅಗುತ್ತಿದ್ದು, ಮಾರ್ಚ್ 25ರಂದು ಯೋಗಿ ಆದಿತ್ಯನಾಥ್ ಅವರು 2ನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಂದು ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಇತರ ಗಣ್ಯರೂ ಪಾಲ್ಗೊಳ್ಳುತ್ತಿದ್ದಾರೆ. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ

ಈ ನಡುವೆ ಯೋಗಿ ಆದಿತ್ಯನಾಥ್ ಅವರ ಸಚಿವ ಸಂಪುಟ ಸೇರಲಿರುವ ಕೆಲವು ಆಕಾಂಕ್ಷಿಗಳ ಪಟ್ಟಿ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ. ಈಚೆಗಷ್ಟೇ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಪಂಜಾಬ್‍ನಲ್ಲಿ ಆಪ್ ಆಗಲೇ ಹೊಸ ಯುಗವನ್ನು ಪ್ರಾರಂಭಿಸಿದೆ. ಆದರೆ, ಬಿಜೆಪಿ ಇನ್ನೂ ಸರ್ಕಾರವನ್ನೇ ರಚಿಸಿಲ್ಲ ಎಂದು ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಕೆಲ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಸಚಿವ ಸಂಪುಟದ ಪಟ್ಟಿಯಲ್ಲಿ ಕೇಶವ್ ಪ್ರಸಾದ್ ಮೌರ್ಯ, ಐಪಿಎಸ್ ಅಸಿಮ್ ಅರುಣ್, ಸ್ವತಂತ್ರ ದೇವ್ ಸಿಂಗ್, ಬೇಬಿ ರಾಣಿ ಮಯೂರ, ಅದಿತಿ ಸಿಂಗ್, ಪಂಕಜ್ ಸಿಂಗ್ ಮೊದಲಾದವರು ರೇಸ್‍ನಲ್ಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸೇನೆಗೆ ತಯಾರಿ – ಕೆಲಸ ಮುಗಿಸಿ ಪ್ರತಿದಿನ 10 ಕಿಮೀ ಓಡಿಕೊಂಡೇ ಮನೆಗೆ ಹೋಗ್ತಾನೆ!

Comments

Leave a Reply

Your email address will not be published. Required fields are marked *