ಯುವಕ ಸಾವು – ರಣರಂಗವಾಯ್ತು ಆಸ್ಪತ್ರೆ

ಯಾದಗಿರಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದನು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ನಿವಾಸಿ ಶೇಖ್‍ನಬಿ (20) ಮೃತ ಯುವಕ. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಯಾದಗಿರಿ ನಗರದ ಲುಂಬಿನಿ ವನದ ಹತ್ತಿರ 407 ಪಿಕಪ್ ವಾಹನ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಗರದ ಮದನಪುರಗಲ್ಲಿ ನಿವಾಸಿ ಶೇಖ್‍ನಬಿ ಗಂಭೀರ ಗಾಯಗೊಂಡಿದ್ದನು. ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ ಆಸ್ಪತ್ರೆಯಲ್ಲಿ ಸೂಕ್ತ ಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ, ವೈದ್ಯರ ನಿಷ್ಕಾಳಜಿಯಿಂದ ಮೃತಪಟ್ಟಿದ್ದಾನೆಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಅಲ್ಲದೇ ಆಸ್ಪತ್ರೆ ಒಳಗೆ ನುಗ್ಗಿ ಕಿಟಕಿಯ ಗಾಜು ಪುಡಿ ಪುಡಿ ಮಾಡಿದ್ದಾರೆ. ನಂತರ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ನಗರ ಠಾಣೆಯ ಪಿಎಸ್‍ಐ ಬಾಪುಗೌಡ ಅವರು, ನಿಂತಿದ್ದ ಜನರ ಮೇಲೆ ಲಾಠಿ ಬಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *