Hassan | ಹೋಟೆಲ್‌ನಲ್ಲಿ ಊಟ ಮಾಡಿ ಕೈತೊಳೆಯುವಾಗ ಪ್ರಾಣಬಿಟ್ಟ ಯುವಕ

ಹಾಸನ: ಹೋಟೆಲ್‌ನಲ್ಲಿ (Hotel) ಊಟ ಮಾಡಿ ಕೈತೊಳೆಯುವಾಗ ಕುಸಿದು ಬಿದ್ದು ಯುವಕ (Youth) ಸಾವನ್ನಪ್ಪಿದ ಘಟನೆ ಹಾಸನ (Hassan) ನಗರದ ಬಸಟ್ಟಿಕೊಪ್ಪಲಿನಲ್ಲಿ ನಡೆದಿದೆ.

ಬಾಲರಾಜ್ ಬಹದ್ದೂರ್ (26) ಮೃತ ಯುವಕ. ಹಾಸನದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಬಾಲರಾಜ್ ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ನಾನ್‌ವೆಜ್ ಊಟ ಮಾಡಿದ್ದ. ಊಟ ಮಾಡಿ ಕೈತೊಳೆಯುವಾಗ ವಾಂತಿ ಮಾಡಿಕೊಂಡು ಕುಸಿದು ಬಿದ್ದು ಹಠಾತ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬದಲಾಗಲಿದೆ ಯುಪಿಐನ ಕೆಲ ನಿಯಮಗಳು – ಆ.1ರಿಂದ ಹೊಸ ನಿಯಮ ಜಾರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಷ್ಯಾದ ಕರಾವಳಿಯಲ್ಲಿ 8.7 ತೀವ್ರತೆಯ ಭಾರೀ ಭೂಕಂಪ – ಅಮೆರಿಕ, ಜಪಾನ್‌ಗೆ ಸುನಾಮಿ ಎಚ್ಚರಿಕೆ