ಬಸ್‍ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಯುವಕನಿಗೆ ಚಾಕು ಇರಿತ – ಇಬ್ಬರು ಅಪ್ರಾಪ್ತರು ಅರೆಸ್ಟ್

ಬೆಳಗಾವಿ: ಬಸ್‍ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ (Belagavi) ಮಾರ್ಕೆಟ್ ಠಾಣೆ ಪೊಲೀಸರು (Police) ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ.

ಬುಧವಾರ ಪಂತ ಬಾಳೇಕುಂದ್ರಿ ಬಸ್‍ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಬಂಧಿತ ಬಾಲಕ ಹಾಗೂ ಯುವಕ ಮಾಜ್ ಸನದಿ (20) ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ಬಾಲಕ, ಕೇಂದ್ರ ಬಸ್ ನಿಲ್ದಾಣಕ್ಕೆ ತನ್ನ ಸ್ನೇಹಿತನನ್ನು ಕರೆಸಿಕೊಂಡು ಮಾಜ್ ಸನದಿಗೆ ಚಾಕು ಇರಿದಿದ್ದರು. ಬಳಿಕ ಅಲ್ಲಿಂದ ಇಬ್ಬರು ಪರಾರಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ಗೆ ಒಂದೇ ವಾರದಲ್ಲಿ 2 ಬಾರಿ ಬಾಂಬ್ ಬೆದರಿಕೆ

ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆ ನಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದೇವೆ. ಇನ್ನೂ ಮುಂದೆ ಇಂತಹ ಅಪರಾಧ ತಡೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆ. ಮಾರ್ಕೆಟ್ ಪ್ರದೇಶ, ಸಾರ್ವಜನಿಕವಾಗಿ ಮಾರಕಾಸ್ತ್ರಗಳ ಹಿಡಿದು ಓಡಾಡುವುದು, ವಾಹನಗಳಲ್ಲಿ, ಬ್ಯಾಗ್‍ಗಳಲ್ಲಿ ಇಟ್ಟುಕೊಂಡು ಓಡಾಡುವುದು ಕಂಡು ಬಂದರೆ, ಅವರನ್ನ ಕೂಡಲೇ ಬಂಧಿಸುತ್ತೇವೆ. ಅಂತವರ ಮೇಲೆ ರೌಡಿಶೀಟರ್ ತೆರೆರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್‌