ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪನನ್ನು ವಜಾಗೊಳಿಸುವಂತೆ ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಚಾರವಾಗಿ ಈಶ್ವರಪ್ಪ ವಿರುದ್ಧ ಇದೀಗ ಕೇಸ್ ದಾಖಲಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಅಮಿತ್ ಶಾ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಬಳಿ ಸಚಿವ ಈಶ್ವರಪ್ಪ ಶೇ.40 ರಷ್ಟು ಕಮಿಷನ್ ಕೇಳಿದ್ದಾರೆ. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೊನೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಯುವ ಕಾಂಗ್ರೆಸ್ ಆರೋಪಿಸಿ, ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ಹೆದರಲ್ಲ: ಈಶ್ವರಪ್ಪ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕದ ಸಚಿವ ಕೆಎಸ್ ಈಶ್ವರಪ್ಪ ಹಾಗೂ ಅವರ ಸಹಾಯಕರಾದ ಬಸವರಾಜ್ ಮತ್ತು ರಮೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ.

Comments

Leave a Reply

Your email address will not be published. Required fields are marked *