ವಾರದ ಹಿಂದೆ ಮದುವೆಯಾಗಿದ್ದ ಯುವಕ ರಸ್ತೆ ಅಪಘಾತಕ್ಕೆ ಬಲಿ – ಒಂದೇ ವಾರದಲ್ಲಿ 12 ಸಾವು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮುಂದುವರಿಯುತ್ತಿದೆ. ಕಳೆದ 1 ವಾರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 12 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಹುಬ್ಬಳ್ಳಿಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿಯಾಗಿರುವ ಆನಂದ ಕಳೆದ ಮೇ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ACCIDENT

ಅಣ್ಣಿಗೇರಿ ತಾಲ್ಲೂಕಿನ ಭದ್ರಾಪೂರ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ತಿಮ್ಮಣ್ಣ ಮರಿಗೌಡರ್ (27), ಮುಹಬಕರ್ ಅಲಿ (22), ಜುಬೇಕರ್ (25) ಮತ್ತು ಸುಹೇಬಾ (23) ಗಾಯಗೊಂಡಿದ್ದಾರೆ. ಸುಹೇಬಾಗೆ ಎದೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಣ್ಣಿಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *