ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೊರವಲಯದ ನೆಲಮಂಗಲ ತಾಲೂಕಿನ ಬೈರನಾಯನಹಳ್ಳಿಯಲ್ಲಿ ನಡೆದಿದೆ.

ಬೈರನಾಯಕನಹಳ್ಳಿ ನಿವಾಸಿ ಮನೋಜ್ (20) ಕೊಲೆಯಾದ ದುರ್ದೈವಿ ಯುವಕ. ಮೃತ ಮನೋಜ್ ಗ್ರಾಮದ ಹೊರಭಾಗದಲ್ಲಿದ್ದ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಶನಿವಾರವೂ ತೋಟಕ್ಕೆ ತೆರಳಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಭಾನುವಾರ ಬೆಳಗ್ಗೆ ತೋಟಕ್ಕೆ ಕೂಲಿ ಕಾರ್ಮಿಕರು ಬಂದು ನೋಡಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣ ಏನು ಹಾಗೂ ಕೃತ್ಯ ಎಸಗಿದವರು ಯಾರು ಎನ್ನುವುದು ತಿಳಿದು ಬಂದಿಲ್ಲ.

ಘಟನೆ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *