ಮೈಸೂರು: ಒಂದು ತಲೆಯ ಹಾವನ್ನು ಎರಡು ತಲೆ ಹಾವು ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಮುಂದಾಗಿದ್ದ ನಾಲ್ವರು ಯುವಕರನ್ನು ಬಂಧಿಸಲಾಗಿದೆ.
ಅರವಿಂದ್, ಕಾವೇರಪ್ಪ, ಸಿ.ಕೆ ಸೋಮಯ್ಯ ಹಾಗು ಅಭಿಷೇಕ್ ಬಂಧಿತ ಆರೋಪಿಗಳು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಆರು ಜನರ ತಂಡ ಎರಡೂವರೆ ಅಡಿ ಉದ್ದದ ದಪ್ಪ ತಲೆಯ ಹಾವನ್ನು ಹಿಡಿದಿದ್ದಾರೆ.

ಹಾವು ನೋಡುವುದಕ್ಕೆ ಎರಡು ತಲೆ ಇದ್ದಂತೆ ಕಾಣುತ್ತದೆ. ಹೀಗಾಗಿ ಜನರನ್ನು ಯಾಮಾರಿಸಿ ಮಾರಾಟ ಮಾಡಲು ಮುಂದಾಗಿದ್ದರು. ಹಾವನ್ನು ಮಾರಾಟ ಮಾಡಲು ರಸ್ತೆಯಲ್ಲಿ ನಿಂತಿದ್ದಾಗ ಹುಣಸೂರಿನ ಟೌನ್ ಠಾಣೆ ಪೊಲೀಸರು ಅನುಮಾನಗೊಂಡು ಯುವಕರನ್ನು ವಿಚಾರಿಸಿದ್ದಾರೆ. ಈ ವೇಳೆ ಪ್ರಕರಣ ಬಯಲಾಗಿದೆ.
ತಕ್ಷಣ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply