ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಪೊಲೀಸರ ಮೇಲೆಯೇ ಯುವಕರು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಲಕ್ಷ್ಮಿಚಿತ್ರ ಟಾಕೀಸ್ ಬಳಿ ಗಾಂಜಾ ಹಾಗೂ ಮದ್ಯದ ಅಮಲಿನಲ್ಲಿದ್ದ ಯುವಕರು ರಸ್ತೆಯಲ್ಲಿ ಸಾರ್ವಜನಿಕರಿಗೆ ಕಿರಿಕ್ ಮಾಡಿದ್ದಾರೆ. ಇದರಿಂದಾಗಿ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇವರ ವರ್ತನೆ ಬಗ್ಗೆ ಆಕ್ಷೇಪಿಸಿದವರ ಮೇಲೆಯೂ ಹಲ್ಲೆ ಮಾಡಿದ್ದಾರೆ.

ಇದೇ ಸಮಯಕ್ಕೆ ಸ್ಥಳಕ್ಕೆ ಬಂದ ಮುಫ್ತಿಯಲ್ಲಿದ್ದ ಪೊಲೀಸರ ಮೇಲೂ ಹಲ್ಲೆ ಮಾಡಿದ್ದಾರೆ. ಕೊನೆಗೆ ನಾವು ಪೊಲೀಸರು ಎಂದು ಹೇಳಿದರೂ ಬಿಡದೆ ಅವಾಚ್ಯವಾಗಿ ನಿಂದಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮೂವರನ್ನು ಹಿಡಿದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಾಲ್ಕೈದು ಜನರಲ್ಲಿ ಮೂವರು ಮಾತ್ರ ಸಿಕ್ಕಿಬಿದ್ದಿದ್ದಾರೆ.
ಇವರು ಪ್ರತಿಷ್ಠಿತರ ಮಕ್ಕಳು ಎಂಬ ಕಾರಣಕ್ಕೆ ಠಾಣೆಯಲ್ಲಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply